Sunday, September 8, 2024
Google search engine
Homeಅಂಕಣಗಳುಲೇಖನಗಳುಕೆ. ಸುಧಾಕರ್ ರಾಜೀನಾಮೆ ನೀಡಬೇಕು : ಅನಿತಾ ಕುಮಾರಿ ಆಗ್ರಹ

ಕೆ. ಸುಧಾಕರ್ ರಾಜೀನಾಮೆ ನೀಡಬೇಕು : ಅನಿತಾ ಕುಮಾರಿ ಆಗ್ರಹ

ಶಿವಮೊಗ್ಗ :ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ ೨೪ ಕೋವಿಡ್ ರೋಗಿಗಳು ಜೀವ ಕಳೆದುಕೊಂಡ ಘಟನೆ ಕರುಳು ಕಿತ್ತು ಬರುವಂತಹದ್ದು. ಘಟನೆಯ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಕುಮಾರಿ ಆಗ್ರಹಿಸಿದ್ದಾರೆ.
ಜೀವ ಕಳೆದುಕೊಂಡವರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಬಿಜೆಪಿ ಸರ್ಕಾರವೇ ತಲೆ ತಗ್ಗಿಸಬೇಕಾದ ಘಟನೆ ಇದು. ಮುಖ್ಯಮಂತ್ರಿ ಸೇರಿದಂತೆ ಕೆಲವು ಬಿಜೆಪಿ ನಾಯಕರೇ ಈ ಘಟನೆಯನ್ನು ಖಂಡಿಸಿದ್ದಾರೆ. ಇದಕ್ಕೆ ನೇರ ಕಾರಣ ಅಲ್ಲದಿದ್ದರೂ, ಆರೋಗ್ಯ ಸಚಿವ ಕೆ. ಸುಧಾಕರ್ ಅಧಿಕಾರಿಗಳ ಮೇಲೆ ತಪ್ಪುಹೊರಿಸಬಾರದು, ಅದರ ನೈತಿಕ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದಲ್ಲದೇ, ಕೋವಿಡ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲದತ್ತ ಸಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೈ ಮುಗಿದು ಕೇಳಿದರೂ, ಆಮ್ಲಜನಕ ಪೂರೈಸುತ್ತಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಕೈಚೆಲ್ಲಿ ಕುಳಿತಿದ್ದಾರೆ. ಆಮ್ಲಜನಕದ ಕೊರತೆ ಇಡೀ ರಾಜ್ಯವನ್ನು ಬಹುವಾಗಿ ಕಾಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತ? ಜೀವಗಳನ್ನು ನಾವು ಕಳೆದುಕೊಳ್ಳಬೇಕಾಗುತ್ತದೆ. ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮತೆಗೆದುಕೊಳ್ಳಬೇಕು. ವಿರೋಧ ಪಕ್ಷ, ಆರೋಗ್ಯ ಇಲಾಖೆ, ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ಮತ್ತೊಮ್ಮೆ ಉನ್ನತಮಟ್ಟದ ಸಭೆ ನಡೆಸಿ ಆಮ್ಲಜನಕವೂ ಸೇರಿದಂತೆ ಅತಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments