ಶಿವಮೊಗ್ಗ : ನಗರದ ಸರ್ವೋದಯ ಪದವಿ ಪೂರ್ವ ಕಾಲೇಜಿನಲ್ಲಿ ಜಯನಗರ ಪೊಲೀಸ್ ಠಾಣೆ ವತಿಯಿಂದ ಕಾನೂನುಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ವಿಧ್ಯಾರ್ಥಿನಿಯರು, ಪೋಷಕರು ಹಾಗೂ ಕಾಲೇಜಿನ ಪ್ರಾಧ್ಯಾಪಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನುದ್ದೇಶಿಸಿ ಜಯನಗರ ಪೊಲೀಸ್ ಠಾಣೆ ಪಿಎಸ್ ಐ ಶಾಕುಂತಲಾ ಅವರು ಮಾತನಾಡಿ,ಮಹಿಳೆಯರ ಮತ್ತು ವಿಧ್ಯಾರ್ಥಿನಿಯರ ಸುರಕ್ಷತೆಯ ದೃಷ್ಠಿಯಿಂದ ಚೆನ್ನಮ್ಮ ಪಡೆಯನ್ನು ರಚಿಸಲಾಗಿದ್ದು, ನೀವು ಕಾಲೇಜಿಗೆ ಹೋಗುವಾಗ ಅಥವಾ ಕಾಲೇಜಿನಿಂದ ಬರುವ ಸಂದರ್ಭದಲ್ಲಿ ಮತ್ತು ಬಸ್ ನಿಲ್ದಾಣ ಅಥವಾ ಬಸ್ ನಲ್ಲಿ ಪ್ರಾಯಾಣಿಸುವಾಗ ರಸ್ತೆಯಲ್ಲಿ ಹೋಗುವಾಗ ಯಾರಾದರೂ ನಿಮ್ಮೊಂದಿಗೆ ಅನುಚಿತವಾಗಿ ವರ್ತಿಸಿ ನಿಮಗೆ ತೊಂದರೆ* ನೀಡಿದರೆ, ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ, ಚೆನ್ನಮ್ಮಪಡೆಯ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಕೂಡಲೇ ಸ್ಥಳಕ್ಕೆ ಬಂದು ನಿಮಗೆ ತೊಂದರೆ ನೀಡುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುಲಿದ್ದಾರೆಂದು ಮಾಹಿತಿ ನೀಡಿದರು. ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಶಿಕ್ಷಣವೇ ಪ್ರಮುಖ ಮಾರ್ಗವಾಗಿರುತ್ತದೆ. ಆದ್ದರಿಂದ ವಿಧ್ಯಾರ್ಥಿ ಜೀವನದಲ್ಲಿ ತಮ್ಮ ಗಮನವನ್ನು ಬೇರೆಡೆಗೆ ಹರಿಸದೇ ಏಕಾಗ್ರತೆಯಿಂದ ಓದಿನ ಕಡೆ ಹೆಚ್ಚಿನ ಗಮನ ನೀಡಿ ಮತ್ತು ಯಾರೇ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರದಿಂದಿರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ, ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಮತ್ತು *ಶ್ರೀ ಶಶಿಕುಮಾರ್, ಪ್ರಾಂಶುಪಾಲರು* ಸರ್ವೋದಯ ಕಾಲೇಜು, ಕಾಲೇಜಿನ ಪ್ರಾಧ್ಯಾಪಕರು, ವಿಧ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.