Thursday, December 5, 2024
Google search engine
Homeಇ-ಪತ್ರಿಕೆಬಿಜೆಪಿ ಮೈಸೂರು ಪಾದಯಾತ್ರೆ ನಿಲ್ಲಿಸದಿದ್ದಲ್ಲಿ ಉಗ್ರ ಹೋರಾಟ: ಎಸ್.ಪಿ.ಶೇಷಾದ್ರಿ

ಬಿಜೆಪಿ ಮೈಸೂರು ಪಾದಯಾತ್ರೆ ನಿಲ್ಲಿಸದಿದ್ದಲ್ಲಿ ಉಗ್ರ ಹೋರಾಟ: ಎಸ್.ಪಿ.ಶೇಷಾದ್ರಿ

ಶಿವಮೊಗ್ಗ: ಸುಭದ್ರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈಸೂರು ಪಾದಯಾತ್ರೆ ಹಮ್ಮಿಕೊಂಡಿರುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಅಹಿಂದ ವತಿಯಿಂದ ಇಡೀ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅಹಿಂದ ವರ್ಗದ ಉಪಾಧ್ಯಕ್ಷ ಎಸ್.ಪಿ.ಶೇಷಾದ್ರಿ ಹೇಳಿದರು.

ಮಂಗಳವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಕಂಗಾಲಾಗಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಧಿಕಾರವಿಲ್ಲದೇ ಹಪಹಪಿಸುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣ ಮುಂದಿಟ್ಟುಕೊಂಡು ಸದನದ ಸಮಯವನ್ನೇ ವ್ಯರ್ಥ ಮಾಡಿದರು. ಈಗಾಗಲೇ ಈ ಎರಡೂ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ತನಿಖೆ ನಡೆಯುತ್ತಿದೆ. ರಾಜ್ಯಪಾಲರಿಗೆ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೂಡ ನೀಡಲಾಗಿದೆ. 1935ರಿಂದ ಇಲ್ಲಿಯವರೆಗೆ ನಡೆದ ಘಟನಾವಳಿಗಳ ಸ್ಪಷ್ಟ ಮಾಹಿತಿ ಕೊಟ್ಟಿದ್ದಾರೆ. ಅವರದೇ ಪಕ್ಷದ ಬಸವನಗೌಡ ಪಾಟೀಲ್ ಯತ್ನಾಳ್ ಕೂಡ ಹಗರಣದ ತನಿಖಾ ವರದಿ ಬರಲಿ. ನಂತರ ಪಾದಯಾತ್ರೆ ಎಂದಿದ್ದಾರೆ. ಹೀಗಿದ್ದರೂ ಕೂಡ ರಾಜಕಾರಣಕ್ಕಾಗಿ ಈ ಪಾದಯಾತ್ರೆ ಮಾಡುತ್ತಿರುವುದು ದುರಾದೃಷ್ಟಕರ ಎಂದರು.

ಹಾಗಾಗಿ ಜೆಡಿಎಸ್, ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಕೈಬಿಡಬೇಕು. ರಾಜ್ಯ ಸರ್ಕಾರದ ವಿರುದ್ಧ ಪಿತೂರಿ ಮಾಡುವುದನ್ನು ಈ ಕೂಡಲೇ ನಿಲ್ಲಿಸಿ ರಾಜ್ಯದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಸಹಕರಿಸಬೇಕು. ಇಲ್ಲದಿದ್ದರೆ, ಈ ಎರಡೂ ಪಕ್ಷಗಳ ನಾಯಕರ ವಿರುದ್ಧ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬಹಿಷ್ಕಾರ, ಮುಷ್ಕರ, ಧರಣಿಯಂತಹ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಕುಮಾರ್,  ಮೋಹನ್, ವಕೀಲ ರಾಮಚಂದ್ರಪ್ಪ, ರೈತ ಮುಖಂಡ ಗಣೇಶ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments