Wednesday, September 18, 2024
Google search engine
Homeಇ-ಪತ್ರಿಕೆಶರಾವತಿಯಿಂದ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರು: ಸಚಿವರ ಭರವಸೆ

ಶರಾವತಿಯಿಂದ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರು: ಸಚಿವರ ಭರವಸೆ

ಸೊರಬ: ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಿಗೂ ಶರಾವತಿ ನದಿಯಿಂದ ಸಮರ್ಪಕ ಕುಡಿಯುವ ನೀರಿನ ಯೋಜನೆ ರೂಪಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಸದ್ಯದಲ್ಲಿಯೇ ಆಡಳಿತಾತ್ಮಕ ಅನುಮೋಧನೆ ದೊರೆಯಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಗ್ಗಿಸಲು ಹಾಗೂ ಶುದ್ಧ ಕುಡಿಯುವ ನೀರು ಒದಗಿಸಲು ಶರಾವತಿ ಕುಡಿಯುವ ನೀರಿನ ಯೋಜನೆ ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕ್ರಿಯಾಯೋಜನೆ ರೂಪಿಸಬೇಕಿದೆ ಎಂದರು.

 ಶರಾವತಿ ನದಿಯಿಂದ ಸಮರ್ಪಕ ಕುಡಿಯುವ ನೀರಿನ ಯೋಜನೆ ರೂಪಿಸಲು ಸರಕಾರಕ್ಕೆ ಮುಂದೆ ಇದ್ದು  ಸಾಗರ ಹಾಗೂ ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರಿಗೆ ಸೊರಬದ ಒಳಚರಂಡಿ ವ್ಯವಸ್ಥೆಗೆ ಜಾಗವನ್ನು ಹಸ್ತಾಂತರ ಹಾಗೂ ಸರ್ವೆಕಾರ್ಯ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಿದಾಗ ಸರ್ವಾನುಮತದಿಂದ ಒಪ್ಪಿಗೆ ನೀಡಲಾಯಿತು.

ಪುರಸಭೆ ವ್ಯಾಪ್ತಿಗೆ ಒಳಪಟ್ಟ ಕೊಡಕಣಿ, ಹಳೇಸೊರಬ, ಚಿಕ್ಕಶಕುನ, ಸೀಗೇಹಳ್ಳಿ, ನಡಹಳ್ಳಿ, ಜೇಡಿಗೇರಿ, ಮರೂರು ಗ್ರಾಮಗಳು ಗ್ರಾಮ ಪಂಚಾಯಿತಿಯಿಂದ ಹಸ್ತಾಂತರಗೊಂಡಿದ್ದು ಅಲ್ಲಿನ ಸೊತ್ತುಗಳ ನಿರ್ವಹಣೆಗೆ ಕ್ರಮ ವಹಿಸುವ ಬಗ್ಗೆ ಚರ್ಚೆ ನಡೆಯಿತು.

ಸಭೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ಹಾಗೂ ಆಡಳಿತಧಿಕಾರಿ ಆ‌ರ್.ಯತೀಶ್, ತಹಸೀಲ್ದಾ‌ರ್ ಮಂಜುಳಾ ಬಿ.ಹೆಗಡಾಳ, ಪುರಸಭಾ ಮಾಜಿ ಅಧ್ಯಕ್ಷರುಗಳಾದ. ಎಂ.ಡಿ. ಉಮೇಶ್, ಈರೇಶ್ ಮೇಸ್ತ್ರಿ, ಮಾಜಿ ಉಪಾಧ್ಯಕ್ಷ  ಮಧುರ.ಜಿ. ಶೇಟ್, ಪುರಸಭೆ ಸದಸ್ಯರಾದ ಪ್ರಸನ್ನ ಕುಮಾರ್ ದೊಡ್ಮನೆ,ಶ್ರೀ ರಂಜಿನಿ, ಪ್ರೇಮ ಟೋಕಪ್ಪ  , ಪ್ರಭು ಮೇಸ್ತ್ರಿ, ಅನ್ಸರ್ ಅಹ್ಮದ್, ಸುಲ್ತಾನ ಬೇಗಮ್, ಆಫ್ರಿನಾ ಬಾನು,  ನಟರಾಜ್, ವಿಜಯಲಕ್ಷ್ಮಿ  ಮುಖ್ಯಾಧಿಕಾರಿ ಚಂದನ್, ಸೇರಿದಂತೆ ಅಧಿಕಾರಿಗಳಿದ್ದರು.

RELATED ARTICLES
- Advertisment -
Google search engine

Most Popular

Recent Comments