Wednesday, July 24, 2024
Google search engine
Homeಇ-ಪತ್ರಿಕೆಇಸ್ಪೀಟ್; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 6 ಮಂದಿ ಕೃಷ್ಣ ನದಿಯಲ್ಲಿ ನೀರುಪಾಲು

ಇಸ್ಪೀಟ್; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 6 ಮಂದಿ ಕೃಷ್ಣ ನದಿಯಲ್ಲಿ ನೀರುಪಾಲು

ವಿಜಯಪುರ: ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿಯ ಮಾಹಿತಿಯನ್ನರಿತು ತಪ್ಪಿಸಿಕೊಳ್ಳಲು ನದಿಗೆ ಜಿಗಿದಿದ್ದು, ಆರು ಜನ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ.

ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ. 

ಪೊಲೀಸರು ಬರುತ್ತಿದ್ದಾರೆ ಎಂದು ಮಾಹಿತಿ ಸಿಕ್ಕ ಬೆನ್ನಲ್ಲೇ ಭಯದಿಂದ ಕೃಷ್ಣ ನದಿ ತಟದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪು ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿ, ತೆಪ್ಪ ನದಿಯಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿರುವುದಾಗಿದ್ದಾರೆ.

ಕೃಷ್ಣಾ ನದಿ ತಟದಲ್ಲಿ ಗುಂಪೊಂದು ಇಸ್ಪೀಟ್ ಆಟವಾಡುತ್ತಿತ್ತು. ಸ್ಥಳಕ್ಕೆ ಪೊಲೀಸರು ಬರುತ್ತಿದ್ದಾರೆಂಬ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಯದಿಂದ ತಪ್ಪಿಸಿಕೊಳ್ಳಲು ತೆಪ್ಪದ ಮೂಲಕ ನದಿಯ ನಡುಗಡ್ಡೆಯತ್ತ ಹೊರಟ್ಟಿದ್ದಾರೆ. ಆದರೆ, ದುರದೃಷ್ಟವಶಾತ್ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನಡು ನದಿಯಲ್ಲೇ ಮಗುಚಿ ಬಿದ್ದಿರುವುದಾಗಿ ತಿಳಿದುಬಂದಿದೆ. ಈಜು ಬಾರದೇ ನೀರಿನಲ್ಲಿ ಮುಳುಗಿ, ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಸ್ಥಳಕ್ಕೆ ಭೇಟಿ ನೀಡಿ ಕೊಲ್ಹಾರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್‌ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. 

RELATED ARTICLES
- Advertisment -
Google search engine

Most Popular

Recent Comments