Thursday, December 5, 2024
Google search engine
Homeಇ-ಪತ್ರಿಕೆಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ

ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ

ಬೆಂಗಳೂರು: ಮಂಗಳವಾರ ರಾತ್ರಿ ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಯಲ್ಲಿ ಈ ಬರ್ಬರ ಘಟನೆ ನಡೆದಿದ್ದು, ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ.

ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೋರಮಂಗಲದ ವಿಆರ್ ಲೇಔಟ್​​​ನ ಪಿಜಿಯಲ್ಲಿ ವಾಸವಾಗಿದ್ದರು.

ರಾತ್ರಿ 11:30ರ ವೇಳೆಗೆ ಘಟನೆ ನಡೆದಿದೆ. ರಾತ್ರಿ 11:10ರ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದಿದ್ದಾನೆ. ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದೆ. ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular

Recent Comments