ಅಭ್ಯರ್ಥಿ ನೀವೇ ಎಂದುಕೊಂಡು ಮತಯಾಚನೆ ಮಾಡಿ: ಡಾ. ಧನಂಜಯ್‌ ಸರ್ಜಿ ಮನವಿ

ಉಡುಪಿಃ  ನೈರುತ್ಯ ಪದವೀಧರ ಕ್ಷೇತ್ರ  ೮೫,೦೦೦ ಪದವೀಧರ ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರ. ಇಂತಹ ದೊಡ್ಡ ಕ್ಷೇತ್ರದಲ್ಲಿ ಮತದಾರರನ್ನು ತಲುಪುವ ಶಕ್ತಿ ಇರುವುದು ಕಾರ್ಯಕರ್ತರಿಂದ ಮಾತ್ರ ಸಾಧ್ಯ. ದೇವದುರ್ಲಭ ಕಾರ್ಯಕರ್ತರು ತಾವೇ ಅಭ್ಯರ್ಥಿಗಳು ಎಂದುಕೊಂಡು ನನ್ನ ಪರವಾಗಿ ಮತಯಾಚಿಸಬೇಕು ೆಂದು
ಕುಂದಾಪುರ ಮಂಡಲ ಬಿಜೆಪಿ ಕಾರ್ಯಕರ್ತರಲ್ಲಿ ನೈರುತ್ಯ ಪದವೀಧರ ಕೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮನವಿ ಮಾಡಿದರು.

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ  ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು.ಈ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಧನಂಜಯ ಸರ್ಜಿಯವರು,  ರಾಜ್ಯದಲ್ಲಿ ಇತ್ತೀಚಿಗಷ್ಟೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಿದೆ. ಇಡೀ ರಾಜ್ಯದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿರುವುದು ಉಡುಪಿ ಜಿಲ್ಲೆ . ಎರಡನೇ ಸ್ಥಾನವನ್ನು ದಕ್ಶಿಣ ಕನ್ನಡ, ಮೂರನೇ ಸ್ಥಾನವನ್ನು ಶಿವಮೊಗ್ಗ ಪಡೆದುಕೊಂಡಿದೆ. ಇಡೀ ರಾಜ್ಯದಲ್ಲಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿರುವುದು ನೈರುತ್ಯ ಪದವೀಧರ ಕ್ಷೇತ್ರದ ಜಿಲ್ಲೆಗಳು. ರಾಜ್ಯದಲ್ಲಿ ಪ್ರತಿ ವರ್ಷ ೨ ಲಕ್ಷ ಹೆಣ್ಣು ಮಕ್ಕಳು ೧ಲಕ್ಷದ ೭೬,೦೦೦ ಗಂಡು ಮಕ್ಕಳು ಪದವೀಧರರಾಗಿ ಹೊರಹೊಮ್ಮುತ್ತಿದ್ದಾರೆ. ಹಾಗಾಗಿ ಪದವೀಧರರು ಹಾಗೂ ಶಿಕ್ಷಕರಿಗೆ ವೈದಕೀಯ ಸೌಲಭ್ಯಗಳು ಹೆಚ್ಚು ಹೆಚ್ಚು ಸಿಗಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ದೇಶದ ಪ್ರತಿಯ್ತೊಬ್ಬ ನಾಗರಿಕನಿಗೂ ಅರೋಗ್ಯ ಸೌಲಭ್ಯ ಸಿಗಬೇಕು ಎಂದು ಆ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸರ್ಕಾರಿ  ವೈದಕೀಯ ಕಾಲೇಜುಗಳು ಇರಬೇಕು. ಉಡುಪಿ ಜಿಲ್ಲೆಗೂ ಒಂದು ಸರಕಾರಿ ವೈದಕೀಯ ಕಾಲೇಜು ಸಿಗಬೇಕು. ಈ ರೀತಿಯ ಅನೇಕ ಸವಾಲುಗಳಿವೆ, ಈ ನಿಟ್ಟಿನಲ್ಲಿ ಪದವೀಧರರ ಧ್ವನಿಯಾಗಿ ವಿಧಾನ  ಪರಿಷತ್ ನಲ್ಲಿ ನಿಮ್ಮ ಪ್ರತಿನಿಧಿಯಾಗಿ ಇರುತ್ತೇನೆ.  ನನ್ನ ಎಲ್ಲಾ ನಿಷ್ಠಾವಂತ ಕಾರ್ಯಕರ್ತರು ನನ್ನ ಪರವಾಗಿ ಮತಯಾಚಿಸಿ ಅತಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ , ವಿಧಾನ ಪರಿಷತ್‌ನ ವಿರೋಧಪಕ್ಷದ ನಾಯಕರಾದ  ಕೋಟ ಶ್ರೀನಿವಾಸ್ ಪೂಜಾರಿ, ಚುನಾವಣಾ ಸಹ ಪ್ರಭಾರಿಗಳಾದ ಬೈಕೊಡು ಸುಪ್ರದ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಽರ್ ಕೆ. ಎಸ್., ರಾಜ್ಯ ಮಹಿಳಾ ಕಾರ್ಯದರ್ಶಿಗಳಾದ ಶಿಲ್ಪ ಜಿ., ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್ ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್. ಮಾಲತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಲಾರ್ಪಣೆ : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ  ಶುಕ್ರವಾರ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಂಬಳ್ಳಿ ಸಂಜೀವ ಶೆಟ್ಟಿ ಅವರ  ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ  ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ದರು.
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶುಕ್ರವಾರ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ  ದಿ.  ಡಾ. ವಿ. ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು  
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ  ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.