Wednesday, September 18, 2024
Google search engine
Homeಇ-ಪತ್ರಿಕೆನಟ ದರ್ಶನ್ ಬಂಧನ, ವಿಚಾರಣೆ ನಂತರ ಕ್ರಮ: ಪೊಲೀಸ್ ಆಯುಕ್ತ ಬಿ.ದಯಾನಂದ್

ನಟ ದರ್ಶನ್ ಬಂಧನ, ವಿಚಾರಣೆ ನಂತರ ಕ್ರಮ: ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು: ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಈ ವೇಳೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ‘ಭಾನುವಾರ ಅಪರಿಚಿತ ಗಂಡಸಿನ ಶವದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಇತರ ತಾಂತ್ರಿಕ ಆಧಾರದ ಮೇಲೆ ಕೆಲವರನ್ನು ಬಂಧಿಸಲಾಯಿತು. ನಂತರ ಅವರ ವಿಚಾರಣೆ ಬಳಿಕ ಇದು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ. ಇದರ ಹಿಂದೆ ಚಿತ್ರದ ಓರ್ವ ನಟ(ದರ್ಶನ್) ಇರುವುದು ತಿಳಿದು ಬಂದಿದೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಕೊಲೆ ಜೂನ್ 9ರಂದು ಆಗಿದೆ. ಹತ್ತು ಜನರಿಗಿಂತ ಹೆಚ್ಚು ಜನ ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ದರ್ಶನ್ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕ ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ರೇಣುಕಾಸ್ವಾಮಿಗೆ 33 ವರ್ಷ. ಹೆಚ್ಚಿನ ತನಿಖೆ ನಡೆದ ಬಳಿಕವಷ್ಟೇ ನಾವು ಹೆಚ್ಚಿನ ಮಾಹಿತಿ ನೀಡಲು ಸಾಧ್ಯ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಳಗ್ಗೆ 8.30ಕ್ಕೆ ಬೆಂಗಳೂರು ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ದರ್ಶನ್ ಬಂಧನದ ಬೆನ್ನಲ್ಲೇ ಆರ್ ಆರ್‌ ನಗರದಲ್ಲಿ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments