ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಭಾರಿ ವಾಹನ ಸಂಚಾರವನ್ನು ತಾತ್ಕಾಲಿಕ ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿರುತ್ತಾರೆ.
ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂ.27 ರಿಂದ ಸೆ.15 ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೇಳಿದೆ.
ಬದಲಿ ಮಾರ್ಗ ತೀರ್ಥಹಳ್ಳಿ –ಉಡುಪಿಗೆ ತೀರ್ಥಹಳ್ಳಿ- ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದ ಮೂಲಕ ಸಂಚಾರ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುತ್ತಾರೆ.