ಶಿವಮೊಗ್ಗ: ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಹಾಗೂ ಕುಂದು-ಕೊರತೆಗಳ ಬಗ್ಗೆ ಮಾಹಿತಿ ಪಡೆದು, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಅಗತ್ಯವಿರುವ ಕೆಲಸಗಳತ್ತ ಹೆಚ್ಚಿನ ಗಮನ ಹರಿಸುವಂತೆ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಬಾಲ್ಕಿಷ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸ್ಪಿ ಮಿಥುನ್ ಕುಮಾರ್ ಜಿಕೆ, ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಐ.ಎಫ್.ಎಸ್ ಡಾ.ಹನುಮಂತಪ್ಪ ಕೆ.ಟಿ ಸೇರಿದಂತೆ ಸಂಬಂಧಪಟ್ಟ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
…………………………………………………………
ಇತ್ತೀಚಿಗೆ ನಿಧನ ಹೊಂದಿದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ ಭಾನುಪ್ರಕಾಶ್ ರವರ ಮನೆಗೆ ಭೇಟಿ ನೀಡಿದ ಮಧು ಬಂಗಾರಪ್ಪರವರು ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು.
…………………………………………………………
ಮಧು ಬಂಗಾರಪ್ಪರವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅವರ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.