ಪ್ರಾಣಿ ಸಂಗ್ರಾಲಯದ ಸಂಪನ್ಮೂಲ ವ್ಯಕ್ತಿಯಾಗಿ ಮಂಜುನಾಥ್‌

ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್‌ರನ್ನು ಶಿವಮೊಗ್ಗ ಮೃಗಾಲಯದ ಜೂ ಕ್ಲಬ್‌ನಲ್ಲಿ ಸ್ವಯಂ ಕಾರ್ಯಕರ್ತರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಮತ್ತು ಸಲಹೆಗಾರರನ್ನಾಗಿ ನೇಮಕ ಮಾಡಲು ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ನಗರ ಮುಖ್ಯ ಅರಣ್ಯಾಧಿಕಾರಿಗಳು ಶಿವಮೊಗ್ಗ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕರಿಗೆ ಸೂಚನೆ ನೀಡಿದ್ದಾರೆ. ಮಂಜುನಾಥ್‌ರವರು ಉಪಅರಣ್ಯ ಸಂರಕ್ಷಣಾಧಿಕಾರಿಯಾಗಿ ಹಲವು ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ.