Thursday, July 25, 2024
Google search engine
Homeಇ-ಪತ್ರಿಕೆಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ವಿಶೇಷವಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಬೈಲಾದ ಕಂಡಿಕೆ 5(1) ಮತ್ತು 5(5)ರಲ್ಲಿ ಪುದತ್ತವಾಗಿರುವ ಅಧಿಕಾರದನ್ವಯ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್​ ಏಜ್​, ಸ್ಟಾರ್​ ನ್ಯೂಸ್​, ಆಜ್​ ತಕ್​, ದೂರದ ದರ್ಶನದಲ್ಲಿ ಹೀಗೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ.

ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗಿದೆ.

ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸಿದ್ದಾರೆ.

ಹಿರಿಯ ಪತ್ರಕರ್ತೆ ಮತ್ತು ಸುದ್ದಿ ನಿರೂಪಕಿಯಾಗಿರುವ ಆಯೇಷಾ ಖಾನಂ ಅವರು ದೂರದರ್ಶನ ದಕ್ಷಿಣ ಭಾರತದ ಮುಖ್ಯ ವರದಿಗಾರರಾಗಿದ್ದರು. ಜು.9ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

RELATED ARTICLES
- Advertisment -
Google search engine

Most Popular

Recent Comments