ಬಿಜೆಪಿ ರ‍್ಯಾಲಿಯಿಂದ ಕಾಂಗ್ರೆಸ್‌ಗೆ ನಡುಕ : ಬಿ.ವೈ. ರಾಘವೇಂದ್ರ

ಶಿವಮೊಗ್ಗ : ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲ ವಾಗಿದ್ದು, ಬಿಜೆಪಿಯ ಪರಿವರ್ತನಾ ರ‍್ಯಾಲಿಗೆ ವ್ಯಕ್ತವಾಗುತ್ತಿರುವ ಬೆಂಬಲ ದಿಂದಾಗಿ ಕಾಂಗ್ರೆಸ್ ಸರ್ಕಾರಕ್ಕೆ ನಡುಕವುಂಟಾಗಿದೆ ಎಂದು ಪರಿವರ್ತನಾ ರ‍್ಯಾಲಿಯ ಜಿಲ್ಛ್ಲಾ ಸಂಚಾಲಕ ಹಾಗೂ ಶಾಸಕ ಬಿ.ವೈ. ರಾಘವೇಂದ್ರ ಹೇಳಿದರು.
ಇಂದು ನಗರದ ಬಿಜೆಪಿ ಕಾರ್ಯಾ ಲಯದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದಿಂದ ಪರಿವರ್ತನಾ ರ‍್ಯಾಲಿ ಕುರಿತು ನಡೆದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ನ.೨ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಿಂದ ಚಾಲನೆ ಗೊಂಡ ಬಿಜೆಪಿ ಪರಿವರ್ತನಾ ಯಾತ್ರೆಗೆ ರಾಜ್ಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇದ ರಿಂದಾಗಿ ಕಾಂಗ್ರೆಸ್ ಸರ್ಕಾರಕ್ಕೆ ನಡುಕವುಂಟಾಗಿದೆ ಎಂದರು.
ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ಅದನ್ನು ಮುಚ್ಚಿ ಕೊಳ್ಳಲು ಮತ್ತು ಯಾತ್ರೆಗೆ ಸಿಗುತ್ತಿ ರುವ ಬೆಂಬಲದಿಂದ ಹೆದರಿರುವ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿ ಪರಿ ರ್ತನಾ ರ‍್ಯಾಲಿಯನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಇಂದಿನಿಂದಲೇ ಹಗಲಿರುಳು ಶ್ರಮಿಸಬೇಕೆಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಡಿ.೧೩ರಿಂದ ಒಂದು ತಿಂಗಳ ಕಾಲ ಸರ್ಕಾರದ ಖರ್ಚಿನಲ್ಲಿ ಹಾಗೂ ಸರ್ಕಾರಿ ಅಧಿಕಾರಿಗಳನ್ನು ಕಾಂಗ್ರೆಸ್ ಕಾರ್ಯಕರ್ತರಾಗಿ ಪರಿವ ರ್ತಿಸಿಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಅವರು, ನಮ್ಮ ಯಾತ್ರೆಗೆ ಪರ್ಯಾಯ ಯಾತ್ರೆಯಾಗದಂತೆ ಜಿಲ್ಲೆಯಲ್ಲಿ ನಮ್ಮ ಯಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿ ಕೊಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಈಗಾಗಲೇ ಮತದಾನದ ನಂತರ ನಡೆದ ಸಮೀಕ್ಷೆಯಲ್ಲಿ ಗುಜರಾತ್ ಹಾಗೂ ಹಿಮಾಚಲ್ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಚ್ಛಳವಾಗಿದೆ. ಸ್ವಾತಂತ್ರ್ಯ ನಂತರ ಭಾರತ ದೇಶದಲ್ಲಿ ಬಿಜೆಪಿಗೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಶೇ. ೭೨.೦೨ರಷ್ಟು ಭಾಗದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಶೇ.೮೪ಕ್ಕೆ ಏರಿಕೆಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ರಾಜ್ಯ ಸಭಾ ಸದಸ್ಯ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜು ನಾಥ್, ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್, ಕೆ.ಜಿ.ಕುಮಾರ ಸ್ವಾಮಿ, ಮಾಜಿ ಶಾಸಕ ಆರಗ ಜ್ಞಾನೇಂದ್ರ, ಅಶೋಕ್‌ನಾಯಕ್, ಧೀರರಾಜ್ ಹೊನ್ನವಿಲೆ, ವಿರೂಪಾಕ್ಷಪ್ಪ ಮೊದಲಾದವರಿದ್ದರು.