ಮೇ ೨೮ ರಂದು ಸ್ವಯಂ ಘೋಷಿತ ಬಂದ್ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ

ಶಿವಮೊಗ್ಗ : ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ರೈತರ ಸಾಲ ಮನ್ನಾ ಮಾಡಬೇಕಾದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಮೇ ೨೮ ರಂದು ಸ್ವಯಂ ಘೋಷಿತ ಕರ್ನಾಟಕ ಬಂದ್‌ಗೆ ನಿಡಿರುವ ಕರೆ
ಹಿನ್ನೆಲೆಯಲ್ಲಿ ಅಂದು ಜಿಲ್ಲೆಯಲ್ಲಿಯೂ ಸಹ ಬಿಜೆಪಿ ವತಿಯಿಂದ ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಪಕ್ಷದ
ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಯವರು ಅಧಿಕಾರಕ್ಕೆ ಬಂದ ೨೪ ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಇದೀಗ ಅಧಿಕಾರಕ್ಕೆ ಬಂದಿದ್ದಾರೆ. ಆದರೂ ಸಹ ಸಾಲ ಮನ್ನಾ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ ೨೮ ರಂದು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಲಾ ಗಿದ್ದು, ಜಿಲ್ಲೆಯ ಜನತೆ ಕರೆಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.
ನಿನ್ನೆ ಸದನದಲ್ಲಿ ನಮ್ಮ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷದ ನಾಯಕರಾಗಿ ರುವ ಬಿ.ಎಸ್. ಯಡಿಯೂರಪ್ಪ ನವರ ಮಾತಿನಿಂದ ಎಚ್ಚರಗೊಂಡಿ ರುವ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ನಿನ್ನೆ ಸಂಜೆಯೇ ಅಧಿಕಾರಿ ಗಳ ತುರ್ತು ಸಭೆ ಕರೆದಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಆದರೆ ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಗಳು ಆದೇಶವನ್ನು ಹೊರಡಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಪ್ರತಿಷ್ಠಿತ ಮಠ ಗಳಲ್ಲಿ ಒಂದಾಗಿರುವ ಸಿರಿಗೆರೆ ತರಳು ಬಾಳು ಮಠದ ಶಾಖಾ ಮಠವಾಗಿ ರುವ ಸಾಣೇಹಳ್ಳಿ ಮಠದ ಶೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರನ್ನು ರಾಜಕೀಯಕ್ಕೆ ಬನ್ನಿ ಎಂದು ಆಹ್ವಾನ ನೀಡಿರು ವುದನ್ನು ನಮ್ಮ ಪಕ್ಷ ಖಂಡಿಸುತ್ತದೆ ಎಂದರು.
ರೈತರ ಸಾಲ ಮನ್ನಾ ವಿಚಾರದಲ್ಲಿ ಶ್ರೀಗಳು ಅತ್ಯಂತ ಸ್ಪಷ್ಟವಾಗಿ ತಮ್ಮ ನಿಲುವನ್ನು ತಿಳಿಸಿದ್ದಾರೆ. ಅದನ್ನು ಮುಖ್ಯಮಂತ್ರಿಗಳು ಉತ್ತಮ ರೀತಿಯಲ್ಲಿ ಸ್ವೀಕರಿಸಬೇಕಾಗಿತ್ತು. ಅದನ್ನು ಮಾಡದೇ ಸಂಘರ್ಷದ ಹಾದಿಗೆ ನಾಂದಿ ಹಾಡಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಶ್ರೀಗಳ ಕ್ಷಮೆಯಾಚಿಸಬೇಕೆಂದರು.
ಶ್ರೀಗಳು ಧಾರ್ಮಿಕ ಕಾರ್ಯ ಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜ ತಿದ್ದುವಂತಹ ಕಾರ್ಯವನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಶಿವಕುಮಾರ ಕಲಾ ತಂಡವನ್ನು ಕಟ್ಟುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ. ಇಂತಹ ಶ್ರೀಗಳ ವಿರುದ್ಧ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡಿರುವುದನ್ನು ನಮ್ಮ ಪಕ್ಷ ಖಂಡಿಸುತ್ತದೆ ಎಂದರು.
ಈಗಾಗಲೇ ಭದ್ರಾವತಿ, ಹೊಸದುರ್ಗ ಸೇರಿದಂತೆ ಮಠದ ಭಕ್ತರು ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಶ್ರೀಗಳೇ ಹೇಳಿಕೆ ನೀಡಿ ಯಾರೂ ಕೂಡಾ ಪ್ರತಿಭಟನೆ ಮಾಡಬಾರದು ಎಂದು ತಿಳಿಸಿದ್ದಾರೆ.ಅಲ್ಲದೆ ಅಂದು ಮಾತನಾಡಿರುವ ಆಡಿಯೋ ಸಿ.ಡಿ. ಯೊಂದಿಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಮತ್ತು ನಮ್ಮ ನಡೆಯ ಬಗ್ಗೆ ನಿಮ್ಮ ತಂದೆಯವರನ್ನು ಕೇಳಿ ತಿಳಿದುಕೊಳ್ಳಿ ಎಂದು ಸಲಹೆಯನ್ನು ಕೂಡಾ ಶ್ರೀಗಳು ನೀಡಿದ್ದಾರೆ. ಆದ್ದ ರಿಂದ ಮುಖ್ಯಮಂತ್ರಿಗಳು ಶ್ರೀಗಳ ವಿರುದ್ಧ ಆಡಿರುವ ಮಾತನ್ನು ವಾಪಾಸ್ ಪಡೆಯಬೇಕು ಮತ್ತು ಕ್ಷಮೆ ಯಾಚಸಬೇಕೆಂದು ಆಗ್ರಹಿಸಿದರು.
ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು ನಾಲ್ಕು ವರ್ಷಗಳು ಸಂದಿವೆ. ಈ ಅವಧಿಯಲ್ಲಿ ಯೋಗಾಭ್ಯಾಸ, ಸ್ವಚ್ಛ ಭಾರತ್, ಸರ್ಜಿಕಲ್ ಸ್ಟ್ರೈಕ್ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯ ವಿಷಯದಲ್ಲಿ ಕೈಗೊಂಡ ಅನೇಕ ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದಾಗಿ ಮೋದಿ ವಿಶ್ವದ ಗಮನ ಸೆಳೆದಿದ್ದು, ಯೋಗಾಭ್ಯಾಸದ ವಿಷಯದಲ್ಲಿ ೧೫೦ ಕ್ಕೂ ರಾಷ್ಟ್ರಗಳ ಗಮನ ಸೆಳೆಯುವಲ್ಲಿ ಯಶಸ್ವಿ ಯಾಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಧು ಸೂದನ್, ರತ್ನಾಕರ್ ಶೆಣೈ, ಹಿರಣಯ್ಯ ಮೊದಲಾದವರಿದ್ದರು.