ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕನೋರ್ವ ಬಲಿಯಾಗಿದ್ದಾನೆ.
ಡೆಂಘೀ ಜ್ವರದಿಂದಾಗಿ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬಾಲಕ ಗಗನ್ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಎಂದು ಮಾಹಿತಿ ಲಭ್ಯವಾಗಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ತಿಳಿಸಿದೆ. ಇನ್ನು ಹಾಸನ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ನಾಲ್ಕು ಮಕ್ಕಳು ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಇನ್ನು ಮೈಸೂರಿನ್ಲಲಿ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಅವರು ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.