ಶಿಕಾರಿಪುರ : ಶೀಘ್ರದಲ್ಲೇ ಶಿವಮೊಗ್ಗದಿಂದ ರಾಣಿಬೆನ್ನೂರ್‌ಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಂದು ತಾಲೂಕಿನ ಅಂಜನಾಪುರ ಜಲಾಶ ಯಕ್ಕೆ ಬಾಗೀನ ಅರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಶಿವಮೊಗ್ಗದಿಂದ ಶಿಕಾರಿಪುರ ರಾಣಿಬೆನ್ನೂರು ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಿದ್ಧವಾಗಿದ್ದು, ಶೀಘ್ರದಲ್ಲಿಯೇ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು.
ಶಿವಮೊಗ್ಗ ನಗರದಲ್ಲಿ ಕಾರ್ಯನಿರ್ವಹಿ ಸುತ್ತಿರುವ ಶಾಹಿ ಗಾರ್ಮೆಂಟ್ಸ್‌ನ ಶಾಖಾ ಕಛೇರಿ ಯನ್ನು ಶಿಕಾರಿಪುರದಲ್ಲಿ ಆರಂಭಿಸುವ ಬಗ್ಗೆಯೂ ಸಹ ಕ್ರಮಕೈಗೊಳ್ಳಲಾಗಿದ್ದು, ಇದು ಕೂಡಾ ಶೀಘ್ರ ದಲ್ಲಿಯೇ ಕಾರ್ಯಾರಂಭ ಮಾಡಲಿದೆ ಎಂದರು.
ಶಿಕಾರಿಪುರ ಕ್ಷೇತ್ರದಲ್ಲಿ ಅತಿರಥ ಮಹಾರಥರು ಸ್ಪರ್ಧಿಸಿ ನನ್ನನ್ನು ಸೋಲಿಸಬೇಕೆಂದು ಪಣ ತೊಟ್ಟ ಸಂದರ್ಭದಲ್ಲೂ ಸಹ ಈ ಕ್ಷೇತ್ರದ ಜನತೆ ನನ್ನ ಕೈ ಹಿಡಿದು ಆಶೀರ್ವದಿಸಿದ್ದಾರೆ. ಇಂತಹ ಕ್ಷೇತ್ರವನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತೇರದಾಳು ಹಾಗೂ ಇತರೇ ಕ್ಷೇತ್ರಗಳಿಂದ ಸ್ಪರ್ಧಿಸು ವಂತೆ ಒತ್ತಾಯ ಬಂದರೂ ಸಹ ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದರು.
ದೇಶದಲ್ಲಿಯೇ ಪ್ರಥಮ ಬಾರಿಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ರಾಜ್ಯ ಕರ್ನಾಟಕವಾಗಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ಇಟ್ಟಿರುವಂತಹ ವಿಶ್ವಾಸವನ್ನು ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ಉಳಿಸಿಕೊಳ್ಳುತ್ತೇನೆ ಎಂದ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಶಾಸಕ ಬಿ.ವೈ.ರಾಘ ವೇಂದ್ರ, ಎಸ್.ರುದ್ರೇಗೌಡ, ಕೆ.ಶೇಖರಪ್ಪ ಮೊದಲಾದವರಿದ್ದರು.