Sunday, November 10, 2024
Google search engine
Homeಇ-ಪತ್ರಿಕೆಕುಮಾರಸ್ವಾಮಿ, ಬೊಮ್ಮಾಯಿ ಅವರಿಂದ ರಾಜೀನಾಮೆ

ಕುಮಾರಸ್ವಾಮಿ, ಬೊಮ್ಮಾಯಿ ಅವರಿಂದ ರಾಜೀನಾಮೆ

ಬೆಂಗಳೂರು: ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ಅವರಿಗೆ ಇಬ್ಬರು ನಾಯಕರೂ ಇಂದು (ಶನಿವಾರ) ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕುಮಾರಸ್ವಾಮಿ, ಲೋಕಸಭೆಯ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದಾರೆ. ಹಾಗಾಗಿ, ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ, ಲೋಕಸಭೆ ಚುನಾವಣೆಯಲ್ಲಿ ಗೆದ್ದು ಹಾವೇರಿ ಕ್ಷೇತ್ರದ ಸಂಸದರಾಗಿದ್ದಾರೆ. ಈ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments