ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದೆ : ಬಿವೈಆರ್

ಶಿವಮೊಗ್ಗ: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದೆ ಎಂದು ಶಾಸಕ ಬಿ.ವೈ.ರಾಘವೇಂದ್ರ ಹೇಳಿದರು.
ಆದಿಚುಂಚನಗಿರಿ ಶಾಲಾ ಆವರಣದಲ್ಲಿಂದು ನಡೆದ ಭಗವತ್ ಚಿಂತನಾ ಶಿಬಿರ ಸಮಾರೋಪ ಹಾಗೂ ಆದಿಚುಂಚನಗಿರಿ ಶಾಖಾ ಮಠದ ೨೭ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಗಳ ಮೂಲಕ ಆದಿಚುಂಚನಗಿರಿ ಮಠ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಾಗಿದೆ. ಶಿಕ್ಷಣ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಾಮೀಜಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸುತ್ತಿದ್ಧಾರೆ. ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ಆದಿಚುಂಚನಗಿರಿ ಕ್ಷೇತ್ರ ಸಾಮಾಜಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆಯಲ್ಲದೇ ಉತ್ತಮ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಇಂತಹ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು.
ಮಾಜಿ ಶಾಸಕ ಆರಗ ಜ್ಞಾನೇಂದ್ರ, ಭಾರತೀಯ ಸಂಸ್ಕೃತಿ ಪರಂಪರೆ ಸಾಧುಸಂತರಿಂದ ಉಳಿದು, ಬೆಳೆದು ಬಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಆರ್.ಕೆ. ಸಿದ್ದರಾಮಣ್ಣ, ಕಡಿದಾಳ್ ಗೋಪಾಲ್, ಎನ್.ಜೆ. ರಾಜಶೇಖರ್, ಯೋಗ ಪಟು ರಾಘವೇಂದ್ರ ಪೈ, ಶಂಕರ್ ಗೋವಿಂದ ಭಟ್, ವೆಂಕಟರಾಮಾನುಜ ಜೀಯರ್ ಸ್ವಾಮೀಜಿ, ಶಿವರಾಮ ಅಗ್ನಿಹೋತ್ರಿ ಇದ್ದರು.