Wednesday, November 13, 2024
Google search engine
Homeಇ-ಪತ್ರಿಕೆಕಾರದ  ಹುಣ್ಣಿಮೆ: ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ವಿಶೇಷ ಪೂಜೆ

ಕಾರದ  ಹುಣ್ಣಿಮೆ: ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ವಿಶೇಷ ಪೂಜೆ

ಸೊರಬ: ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ  ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕಾರದ  ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶುಕ್ರವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ   ಸಾವಿರಾರು ಭಕ್ತರು ತುಂತುರು  ಮಳೆಯ ನಡುವೆಯೂ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.  

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ  ಹಾಗೂ ತೊಟ್ಟಿಲು ಬಾವಿಗೆ  ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.   

ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ  ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ನೆರವೇರಿಸಿದರು.

RELATED ARTICLES
- Advertisment -
Google search engine

Most Popular

Recent Comments