Sunday, September 8, 2024
Google search engine
Homeಅಂಕಣಗಳುಲೇಖನಗಳುತರಬೇತಿ ಪಡೆದ ಚರ್ಮೋದ್ಯಮಿಗಳಿಗೆ ನಿಗಮದಲ್ಲಿ ಉದ್ಯೋಗಾವಕಾಶ

ತರಬೇತಿ ಪಡೆದ ಚರ್ಮೋದ್ಯಮಿಗಳಿಗೆ ನಿಗಮದಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮವು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚರ್ಮೋದ್ಯಮದ ಬೆಳವಣಿಗೆ ಮತ್ತು ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಗೆ ದೇಶದ ಬೆಂಗಳೂರು ಮತ್ತು ಚೆನ್ನೈನಲ್ಲಿ ಹಾಗೂ ಲಂಡನ್‌ನಲ್ಲಿ ತರಬೇತಿ ನೀಡಿ, ತರಬೇತಿ ಪಡೆದವರನ್ನು ನಿಗ ಮದಲ್ಲಿ ಉದ್ಯೋಗಿಗಳನ್ನಾಗಿ ನೇಮಿಸಿ ಕೊಳ್ಳಲು ಉದ್ದೇಶಿಸಲಾಗಿದೆ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಓ.ಶಂಕರ್ ಹೇಳಿದರು.
ಇಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮವು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃಧ್ದಿ ಮತ್ತು ಆದಾಯ ಗಳಿಕೆಗಾಗಿ ತರಬೇತಿ ಶಿಬಿರದ ಉದ್ಘಾಟನೆ ಮತ್ತು ತರಬೇತಿ ಪಡೆದ ಕುಶಲಕರ್ಮಿಗಳಿಗೆ ಸವಲತ್ತು ವಿತರಣಾ ಮತ್ತು ಪ್ರಮಾಣಪತ್ರ ವಿತರಣಾ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿಗಮವು ಪರಿಶಿಷ್ಟ ಜಾತಿಯ ಚರ್ಮೋದ್ಯಮಿಗಳ, ಚರ್ಮ ಕುಶಲ ಕರ್ಮಿಗಳ ಅಭ್ಯುದಯಕ್ಕಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಈ ರೀತಿ ತರಬೇತಿ ಸ್ವಯಂ ಉದ್ಯೋಗ ಮಾಡಲಿಚ್ಚಿಸುವವರು ಲಿಡ್ಕರ್ ನೀಡುವ ಮಾದರಿಯಂತೆ ಚರ್ಮ ಉತ್ಪನ್ನಗಳನ್ನು ತಯಾರಿಸಿ, ಮಾರುಕಟ್ಟೆಗೆ ಅಲೆಯುವ ತಪ್ಪಿಸಲು ಲಿಡ್ಕರ್ ಸಂಸ್ಥೆಯ ಅಂತಹ ಉತ್ಪನ್ನಗಳನ್ನು ಮಾರಾಟಕ್ಕೆ ಪಡೆದು, ಗ್ರಾಹಕರಿಗೆ ಮಾರುತ್ತಿದೆ ಎಂದರು.
ಶಾಸಕ ಕೆ.ಬಿ.ಪ್ರಸನ್ನಕುಮಾರ್ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸೂಡಾ ಅಧ್ಯಕ್ಷ ಇಸ್ಮಾಯಿಲ್‌ಖಾನ್, ಕಾಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ವೇದಾವಿಜಯ ಕುಮಾರ್, ಹನುಮಂತಪ್ಪ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments