ಶಂಕರಘಟ್ಟ : ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹೆಚ್ಚುವರಿ ಮುಖ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಪುಷ್ಕರ್ ಅಭಿಪ್ರಾಯಪಟ್ಟರು.
ಭದ್ರಾ ಹುಲಿ ಸಂರಕ್ಷಿತ ಅರಣ್ಯ 25ನೇ ವರ್ಷದ ವಿಶೇಷ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ, ಭದ್ರಾ ಹುಲಿ ಸಂರಕ್ಷಿತ ಅರಣ್ಯ ಮಂಡಳಿ ಹಾಗೂ ಕುವೆಂಪು ವಿವಿ ಸಂಸ್ಥೆಗಳು ಜಂಟಿಯಾಗಿ 11ನೇ ಹಕ್ಕಿ ಹಬ್ಬವನ್ನು ಭದ್ರಾ ಹುಲಿ ಸಂರಕ್ಷಿತ ಅರಣ್ಯ ಚಿಕ್ಕಮಗಳೂರಿನಲ್ಲಿ ಜೂ.14 ರಿಂದ 16 ರವರೆಗೆ 3 ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಯ ಬಸವ ಸಭಾ ಭವನದಲ್ಲಿ ಶುಕ್ರವಾರ ಹಕ್ಕಿ ಹಬ್ಬ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದ್ದು ಸದ್ಯದಲ್ಲೇ ಅನುಮೋದನೆ ಪಡೆಯಲಾಗುವುದು, ಜೊತೆಗೆ ಪರಿಸರ ಪ್ರವಾಸೋದ್ಯಮದ ಕುರಿತು ಸಂಶೋಧನೆಗಳನ್ನು ನಡೆಸಲಾಗುತ್ತಿದೆ. ಪ್ರಕೃತಿ ಪ್ರಿಯರಿಗೆ ಟ್ರಕಿಂಗ್ ಸೇರಿದಂತೆ ವಿವಿಧ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಯಶ್ಪಾಲ್ ಕ್ಷೀರಸಾಗರ್, ಕಾರ್ಯಯೋಜನೆ ಅಧಿಕಾರಿ ಸೋನಾಲ್ ವ್ರುಷ್ಟಿ, ಶಿವಮೊಗ್ಗ ವಲಯದ ಉಪ ಅರಣ್ಯಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್, ನಂದೀಶ್.ಎಲ್, ಆನಂದ್.ಕೆ.ಸಿ, ರಮೇಶ್ ಬಾಬು, ಕುಲಸಚಿವ ಮಂಜುನಾಥ್.ಎ.ಎಲ್, ಪರೀಕ್ಷಾಂಗ ಕುಲಸಚಿವ ಪೆÇ್ರ. ಗೋಪಿನಾಥ್.ಎಸ್.ಎಂ, ವನ್ಯಜೀವಿ ವಿಭಾಗದ ಅಧ್ಯಕ್ಷ ಪೆÇ್ರ. ವಿಜಯ್ ಕುಮಾರ್ ಉಪಸ್ಥಿತರಿದ್ದರು.