Wednesday, September 18, 2024
Google search engine
Homeಅಂಕಣಗಳುಲೇಖನಗಳುಸಮಾಜ ಒಡೆಯುವ ಶಕ್ತಿಗಳ ಬಗ್ಗೆ ಜಾಗರೂಕರಾಗಿ: ಸಿಎಂ

ಸಮಾಜ ಒಡೆಯುವ ಶಕ್ತಿಗಳ ಬಗ್ಗೆ ಜಾಗರೂಕರಾಗಿ: ಸಿಎಂ

ಸಾಗರ : ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ರಾಜಕಾರಣ ನಡೆಸುವ ಶಕ್ತಿಗಳನ್ನು ಜನರು ತಿರಸ್ಕರಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಸಾಗರ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬಾಬಾ ಸಾಹೇಬ್‌ಅಂಬೇಡ್ಕರ್ ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾ ನದ ಬಗ್ಗೆ ಗೌರವವಿಲ್ಲದವರು ಸಾಮಾಜಿಕ ಜೀವನದಲ್ಲಿ ಇರಲು ನಾಲಾಯಕ್ಕು. ಈ ಮಣ್ಣಿನ ಸಂಸ್ಕೃತಿ, ಇತಿಹಾಸದ ಬಗ್ಗೆ ಯಾರೂ ಪಾಠ ಹೇಳುವ ಅಗತ್ಯವಿಲ್ಲ. ಎಲ್ಲಾ ಮಹನೀಯರಿಗೆ, ಸಂತ ಶರಣರ ಜಯಂತಿಯನ್ನು ನಮ್ಮ ಸರ್ಕಾರ ಆಯೋಜಿಸುತ್ತಿದೆ ಎಂದರು.
ಈ ಇಳಿ ವಯಸ್ಸಿನಲ್ಲೂ ಕಾಗೋಡು ತಿಮ್ಮಪ್ಪ ಅವರಲ್ಲಿರುವ ಬದ್ಧತೆಯನ್ನು ಇತರ ರಾಜಕಾರಣಿಗಳು ಕಲಿಯ ಬೇಕಾಗಿದೆ. ಹೋರಾಟದ ಹಿನ್ನೆಲೆ ಯಿಂದ ಬಂದ ಅವರು ಜನರ ಕಲ್ಯಾಣದ ಬಗ್ಗೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಬಡವರ ಪರವಾದ ನಮ್ಮ ಸಾತ್ವಿಕ ಸಿಟ್ಟು ಸಮಾಜದ ಬಲಾಢ್ಯರಿಗೆ ದುರಂ ಕಾರ ರೀತಿ ಕಾಣುತ್ತದೆ. ಆದರೆ ನಾವು ನಂಬಿದ ಹಾದಿಯಲ್ಲಿ ನಡೆಯುತ್ತಿದ್ದು, ಜನರ ಕೆಲಸದ ವಿಷಯದಲ್ಲಿ ಮುನ್ನುಗ್ಗುವಾಗ ಯಾರನ್ನೂ ಪರಿಗಣಿಸುವ ಅಗತ್ಯವಿಲ್ಲ ಎಂದರು.
ಜಿಲ್ಲಾಉಸ್ತುವಾರಿ ಸಚಿವ ಕಾಗೋಡುತಿಮ್ಮಪ್ಪ, ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮೊದಲಾದವರಿದ್ದರು.

RELATED ARTICLES
- Advertisment -
Google search engine

Most Popular

Recent Comments