Thursday, December 5, 2024
Google search engine
Homeಇ-ಪತ್ರಿಕೆಕರಾವಳಿ, ಮಲೆನಾಡಿನಲ್ಲಿ ಮುಂದಿನ 3 ದಿನಗಳವರೆಗೂ ಅತಿ ಹೆಚ್ಚು ಮಳೆ ಸಂಭವ

ಕರಾವಳಿ, ಮಲೆನಾಡಿನಲ್ಲಿ ಮುಂದಿನ 3 ದಿನಗಳವರೆಗೂ ಅತಿ ಹೆಚ್ಚು ಮಳೆ ಸಂಭವ

ಬೆಂಗಳೂರು: ಭಾನುವಾರದಿಂದ ರಾಜ್ಯದೆಲ್ಲೆಡೆ ನಿರಂತರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜುಲೈ 20ರ ವರೆಗೆ ಮಲೆನಾಡು ಮತ್ತು ಕರಾವಳಿ ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂದಿನ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐಎಂಡಿ ವರದಿ ಆಧರಿಸಿ ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಕಳೆದ ಎರಡು ದಿನಗಳಿಂದ ಈ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments