ವಿಐಎಸ್‌ಎಲ್ ಪುನಶ್ಚೇತನಕ್ಕೆ ಉನ್ನತ ಮಟ್ಟದ ಸಮಿತಿ

ಶಿವಮೊಗ್ಗ: ವಿಐಎಸ್‌ಎಲ್ ಕಾರ್ಖಾನೆಯ ಪುನಶ್ಚೇನಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧ್ಯಯನ ಸಮಿತಿ ರಚಿಸಲಿದ್ದು ಆ ಸಮಿತಿ ನೀಡಿದ ವರದಿಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾ ಗುವುದು ಎಂದು ಕೇಂದ್ರ ಉಕ್ಕು ಖಾತೆ ಸಚಿವ ಚೌದರಿ ಬೀರೇಂದ್ರ ಸಿಂಗ್ ಹೇಳಿದರು.
ವಿಐಎಸ್‌ಎಲ್ ಕಾರ್ಖಾನೆಗೆ ಇಂದು ಭೇಟಿ ನೀಡಿದ್ದ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸುಮಾರು ೧೨೦೦ ಕೋಟಿ ರೂ ಬಂಡವಾಳವನ್ನು ಕೇಂದ್ರ ಸರ್ಕಾರ ಕೊಡಬೇಕಿದೆ. ಇದು ತಕ್ಷಣಕ್ಕೆ ಕಷ್ಟಸಾಧ್ಯ. ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಿ ಅದರಿಂದ ವರದಿ ಪಡೆದು ಬಂಡವಾಳ ಹೂಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಸೇಲ್ ವತಿಯಿಂದ ನೀಡಿದ್ದ ವರದಿ ತೃಪ್ತಿದಾಯಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಒಂದುವರೆ ತಿಂಗಳ ಒಳಗೆ ವರದಿ ನೀಡುವಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು. ಬಳಿಕ ಬಂಡವಾಳ ಹೂಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ಗುತ್ತಿಗೆ ಆಧಾರದ ಕಾರ್ಮಿಕರನ್ನು ಮುಂದು ವರೆಸಲಾಗುವುದು. ಕಾರ್ಖಾನೆಗೆ ಕಚ್ಚಾವಸ್ತು ಅಗತ್ಯವಿದೆ. ರಾಜ್ಯ ಸರ್ಕಾರ ಎರಡು ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದ್ದು ಕೆಲ ಸಮಸ್ಯೆ ಎದುರಾಗಿದೆ. ಅದು ಶೀಘ್ರವೇ ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದರು.
ಮೇಕ್ ಇನ್ ಇಂಡಿಯಾಕ್ಕೆ ಒತ್ತು ನೀಡು ತ್ತಿದ್ದು, ಕಾರ್ಖಾನೆಯನ್ನು ನವೀಕರಣಗೊಳಿಸಲಾಗುವುದು ಎಂದು ತಿಳಿಸಿದರು. ಸಂಸದ ಬಿ.ಎಸ್.ಯಡಿ ಯೂರಪ್ಪ, ಶಾಸಕ ಬಿ.ವೈ.ರಾಘವೇಂದ್ರ ಮೊದಲಾದವರಿದ್ದರು.