ಶಿವಮೊಗ್ಗ : ತುಂಗಾ ಏತನೀರಾವರಿ ಯೋಜ ನೆಯನ್ನು ತಕ್ಷಣ ಪೂರ್ಣಗೊಳಿ ಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ನಗರದ ತುಂಗಾ ಮೇಲ್ದಂಡೆ ಕಛೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿ, ಕಛೇರಿಯ ಮುಖ್ಯ ಇಂಜಿನಿಯರ್ ರವರಿಗೆ ಮನವಿ ಸಲ್ಲಿಸಲಾಯಿತು.
ಏತನೀರಾವರಿ ಯೋಜನೆಯನ್ನು ಅನು ಷ್ಠಾನಗೊಳಿಸಬೇಕೆಂದು ಕಳೆದ ೬೦ ವರ್ಷ ಗಳಿಂದಲೂ ಆ ಭಾಗದ ಜನತೆ ಒತ್ತಾಯಿಸುತ್ತಿ ದ್ದಾರೆ. ರೈತ ಸಂಘ ಹಾಗೂ ಹಸಿರು ಸೇನೆ ಈ ಯೋಜನೆಯನ್ನು ಕಾರ್ಯಗತಗೊಳಿಸ ಬೇಕೆಂದು ಒತ್ತಾಯಿಸಿ ಹಲವು ಬಾರಿ ಹೋರಾಟ ಹಾಗೂ ಚಳವಳಿ ನಡೆಸಿದೆ. ಇದರ ಪರಿಣಾಮವಾಗಿ ಯೋಜನೆಗೆ ಮಂಜೂರಾತಿ ಸಿಕ್ಕು ಈಗಾಗಲೇ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ ಎಂದರು.
ಕಳೆದ ೨೦೧೫ರ ಆಗಸ್ಟ್ ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಿ ನೀರು ಹರಿಸಬೇಕಿತ್ತು. ಇದಕ್ಕೆ ಸಂಬಂಧಪಟ್ಟಂತೆ ವಿದ್ಯುತ್‌ಚ್ಛಕ್ತಿ ಕಾಮಗಾರಿ ಮೊತ್ತವನ್ನು ನವೀಕರಿಸಿ ಹೆಚ್ಚಿನ ಮೊತ್ತಕ್ಕೆ ಅನುಮತಿ ಪಡೆಯದ ಕಾರಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಎಂದರು.
ಕೂಡಲೇ ಈ ಕಾಮಗಾರಿಯನ್ನು ಪೂರ್ಣ ಗೊಳಿಸಬೇಕು. ಆ ಮೂಲಕ ಆ ಭಾಗದ ರೈತ ರಿಗೆ ಹಾಗೂ ಜನ ಜಾನುವಾರುಗಳಿಗೆ ಅನು ಕೂಲ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾ ಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಹೆಚ್.ಆರ್. ಬಸವರಾಜಪ್ಪ, ಕಡಿದಾಳ್ ಶಾಮಣ್ಣ, ಎಸ್.ಶಿವಮೂರ್ತಿ, ಹಿಟ್ಟೂರ್ ರಾಜು, ರಾಘ ವೇಂದ್ರ, ಪಂಚಾಕ್ಷರಿ ಮೊದಲಾದವರಿದ್ದರು.