Tuesday, July 23, 2024
Google search engine
Homeಇ-ಪತ್ರಿಕೆಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ದರ್ಶನ್ ಮತ್ತು ಸಹಚರರು

ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ದರ್ಶನ್ ಮತ್ತು ಸಹಚರರು

ಬೆಂಗಳೂರು: ರೇಣುಕಾ ಸ್ವಾಮಿ  ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್,  ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳನ್ನು ಇಂದು (ಶನಿವಾರ) ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಯ ವಿಸ್ತರಣೆಗೆ ಮನವಿ ಮಾಡಲಾಯಿತು.

ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ಪೊಲೀಸ್  ಕಸ್ಟಡಿಯನ್ನು ಐದು ದಿನಗಳ ಕಾಲ ಮುಂದುವರೆಸಲಾಗಿದೆ.

ಈ ಹಿಂದೆ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಇದೀಗ ದರ್ಶನ್ ಹಾಗೂ ಆರೋಪಿಗಳು ಐದು ದಿನವನ್ನು ಕಸ್ಟಡಿಯಲ್ಲಿ ಕಳೆದಿದ್ದು, ನಾಳೆ ಭಾನುವಾರ ಆಗಿರುವ ಕಾರಣ ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 15 ರಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯನ್ನು ಮುಂದುವರೆಸಲಾಗಿದೆ.

RELATED ARTICLES
- Advertisment -
Google search engine

Most Popular

Recent Comments