Tuesday, November 5, 2024
Google search engine
Homeಇ-ಪತ್ರಿಕೆಮನೆ ಊಟ, ಹಾಸಿಗೆ ಪುಸ್ತಕಕ್ಕೆ ಬೇಡಿಕೆ ಇಟ್ಟು ಕೋರ್ಟ್ ಮೊರೆ ಹೋದ ದರ್ಶನ್!

ಮನೆ ಊಟ, ಹಾಸಿಗೆ ಪುಸ್ತಕಕ್ಕೆ ಬೇಡಿಕೆ ಇಟ್ಟು ಕೋರ್ಟ್ ಮೊರೆ ಹೋದ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟ, ಹಾಸಿಗೆ, ಪುಸ್ತಕ ಬೇಕೆಂದು ಹೈಕೋರ್ಟ್‌ಗೆ‌ ಇಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಈಗ ಅವರು ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದಾಗ ಅತಿಸಾರ, ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ದರ್ಶನ್ ಹೈಕೋರ್ಟ್‌ಗೆ ಕಾರಣಗಳನ್ನು ನೀಡಿದ್ದಾರೆ.

ವಕೀಲ ಪ್ರವೀಣ್ ತಿಮ್ಮಯ್ಯ ಅವರ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ಜೈಲಿನಲ್ಲಿ ನೀಡುತ್ತಿರುವ ಊಟ ಅವರಿಗೆ ಜೀರ್ಣವಾಗುತ್ತಿಲ್ಲ. ಅವರಿಗೆ ಫುಡ್ ಪಾಯಿಸನಿಂಗ್ ಆಗುತ್ತಿದೆ. ಇದರ ಜೊತೆಗೆ ಭೇದಿ ಕೂಡ ಆಗುತ್ತಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ಹೀಗೆಂದು ಜೈಲಿನ ವೈದ್ಯರೇ ಅಭಿಪ್ರಾಯ ನೀಡಿದ್ದಾರೆ.

ಮನೆ ಊಟಕ್ಕೆ ಅನುಮತಿ ಕೋರಿದ್ದಕ್ಕೆ ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ’ ಎಂದು ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ.

ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ದರ್ಶನ್ ಸೇವಿಸಬೇಕು. ಗುರುವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments