ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ : ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಶಿವಮೊಗ್ಗ : ಜೂನ್‌ನಿಂದ ಆಗಸ್ಟ್ ಮಾಹೆಯ ಅವಧಿ ಮಳೆಗಾಲವಾದ್ದರಿಂದ ಈ ಸಮಯದಲ್ಲಿ ಕೀಟಜನ್ಯ ಹಾಗೂ ಸಾಂಕ್ರಾಮಿಕ ರೋಗಗಳ ಹರಡಬಹುದಾದ ಸಂಭವ ಹೆಚ್ಚಾಗಿರುವುದರಿಂದ ಈ ರೋಗಗಳು ಹರಡದಂತೆ ಅಗತ್ಯ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಲೇರಿಯಾ, ಡೇಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಏರ್ಪಡಿಸ ಲಾಗಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರೀ ಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ನಗರದ ಆಯ್ದ ಭಾಗಗಳಿಗೆ ಅನಿರೀ ಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದಾಗ ಸೊಳ್ಳೆಗಳಿಂದ ರೋಗಗಳು ಹರಡಬಹು ದಾದ ಸೂಚನೆ ಇದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಸಂಬಂಧ ಕೈಗೊಂಡ ಮುಂಜಾಗ್ರತಾ ಕ್ರಮ ಗಳ ಕುರಿತು ಕೂಡಲೆ ವರದಿ ನೀಡುವಂತೆ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಸಾಂಕ್ರಾಮಿಕ ರೋಗಗಳನ್ನು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ವೈದ್ಯರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಗೊಳಿಸಲು ಕೇವಲ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸಿದರೆ ಸಾಲದು. ಸಾರ್ವಜನಿಕರೂ ಕೂಡ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು.
ಈ ಸಂಬಂಧ ನಾಳೆ ಬೆಳಿಗ್ಗೆ ನಗರದ ಮಾಡ್ರನ್ ಚಿತ್ರಮಂದಿರದ ಆಯ್ದ ಪ್ರದೇಶ ಗಳಿಗೆ ಆರೋಗ್ಯ ಇಲಾಖೆ ಮತ್ತು ಸಂಬಂಧಿತ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುತ್ತಿರು ವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು ಸಾರ್ವ ಜನಿಕರು ತಮ್ಮ ಮನೆಯ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳುವಂತೆ ಸೂಚಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕ್ಕಾಗಿ ಆರೋಗ್ಯ ಇಲಾಖೆ ಕಾರ್ಯಕರ್ತೆರು ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುವಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರುಗಳಿಗೆ ಮಲೇರಿಯಾ, ಡೇಂಗ್ಯೂ, ಚಿಕೂನ್ ಗುನ್ಯಾ ಮುಂತಾದ ಸಾಂಕ್ರಾಮಿಕ ರೋಗಗಳ ಕುರಿತು ಸಕಾಲಿಕ ಹಾಗೂ ಸೂಕ್ತ ನೀಡುವಂತೆ ಸುತ್ತೋಲೆ ಹೊರಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣ, ಆಹಾರ ಗುಣಮಟ್ಟ ಸುರಕ್ಷತೆ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಜಿ.ಪಂ. ಉಪಕಾರ್ಯದರ್ಶಿ ಎ.ಎಸ್.ಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ಟಿ.ಬಿ.ಸತ್ಯನಾರಾಯಣ, ಜಂಟಿ ಕೃಷಿ ನಿರ್ದೇಶಕ ಡಾ.ಮಧುಸೂದನ್, ಪಶು ವೈದ್ಯ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್‌ನಾಯ್ಕ, ಡಾ.ಶಂಕರಪ್ಪ, ಡಾ.ನಟರಾಜ್ ಮೊದಲಾದವರಿದ್ದರು.