ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಎಂ.ಕೆ ಉದಯನಿಧಿ ಸ್ಟಾಲಿನ್‍ಗೆ ಬಿಗ್ ರಿಲೀಫ್ ಸಿಕ್ಕಿದೆ.
ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಇಂದು (ಜೂ.25) ಉದಯನಿಧಿ ಸ್ಟಾಲಿನ್ ನ್ಯಾಯಾಲಯಕ್ಕೆ ಜಾರಾಗಿದ್ದರು.
ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು.