ಬಿಜೆಪಿಗೆ ಮತ ನೀಡಿದ ಎಲ್ಲರಿಗೂ ಕೃತಜ್ಞತೆ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಮತ್ತು ನಾಯಕರ ಪ್ರವಾಸ ಹಾಗೂ ಕಾರ್ಯಕರ್ತರ ಶ್ರಮದಿಂದಾಗಿ ಜಿಲ್ಲೆಯ ಏಳು ಸ್ಥಾನಗಳಲ್ಲಿ ನಮ್ಮ ಪಕ್ಷ ಆರು ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಲು ಸಾಧ್ಯವಾಯಿತು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾv ನಾಡಿದ ಅವರು, ಪಕ್ಷದ ಅಭ್ಯರ್ಥಿ ಗಳಿಗೆ ಮತ ನೀಡಿದ ಮತದಾರರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಮತ್ತು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲ ಬಿಜೆಪಿ ಅಭಿ ಮಾನಿಗಳಿಗೆ ಹೃತ್ಪೂರ್ವಕ ಕೃತಜ್ಞತೆ ಗಳನ್ನು ಪಕ್ಷದ ಪರವಾಗಿ ಸಲ್ಲಿಸುತ್ತೇನೆ ಎಂದರು.
ಬಿಜೆಪಿ ಆರು ಸ್ಥಾನದಲ್ಲಿ ಗೆದ್ದಿರು ವುದು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ದೊಡ್ಡ ಆಘಾತವಾಗಿದೆ. ಜೆಡಿಎಸ್ ಪಕ್ಷವಂತೂ ಒಂದು ಸ್ಥಾನ ದಲ್ಲೂ ಗೆಲ್ಲಲಾಗದೆ ಸೋತಿದೆ, ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವಂತಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ೨೧ ಕಡೆ ಪ್ರಚಾರ ಸಭೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲು ವಿನ ದಡ ಸೇರಿಸಿದರು. ಅಲ್ಲದೆ, ಕಳೆದ ಒಂದು ವರ್ಷದಿಂದ ನಮ್ಮ ರಾಜ್ಯ ನಾಯಕ ಬಿ.ಎಸ್.ಯಡಿ ಯೂರಪ್ಪನವರು ನಡೆಸಿದಂತಹ ಹಲವಾರು ಕಾರ್ಯಕ್ರಮಗಳ ಪರಿಣಾಮ ನಮ್ಮ ಪಕ್ಷ ರಾಜ್ಯದಲ್ಲಿ ೧೦೪ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡಪಕ್ಷವಾಗಿ ಹೊರಹೊಮ್ಮಲು ಸಾಧ್ಯವಾಯಿತು ಎಂದರು.
ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಂತೂ ನಿರೀಕ್ಷೆ ಮೀರಿ ಮತಗಳು ಬಿಜೆಪಿಗೆ ಬಿದ್ದಿವೆ ಎಂದು ಹರ್ಷ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿಯ ರಾಷ್ಟ್ರೀಯತೆ, ಹಿಂದುತ್ವ ಪರ ನೀಲುವುಗಳು ಪಕ್ಷ ಗೆಲ್ಲಲು ವರದಾನವಾದವು.
ಯಡಿಯೂರಪ್ಪನವರು ಮುಖ್ಯ ಮಂತ್ರಿಯಾಗುವ ವಿಶ್ವಾಸವಿದೆ ಎಂದ ಅವರು, ಪಕ್ಷದ ಎದುರು ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ, ಮಹಾನಗರ ಪಾಲಿಕೆ ಚುನಾವಣೆ ನಂತರ ಸಂಸತ್ ಚುನಾವಣೆ ಎದುರಿಗಿದ್ದು ಎಲ್ಲದಕ್ಕೂ ಪಕ್ಷ ಸನ್ನದ್ದವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಆರ್.ಕೆ. ಸಿದ್ದರಾಮಣ್ಣ, ಎಸ್.ದತ್ತಾತ್ರಿ, ಬಿಳಕಿ ಕೃಷ್ಣಮೂರ್ತಿ, ಕೆ.ಜಿ. ಕುಮಾರಸ್ವಾಮಿ, ಎನ್.ಜೆ. ರಾಜಶೇಖರ್, ಡಿ.ಎಸ್. ಅರುಣ್, ಮಧುಸೂದನ್, ಹಿರಣಯ್ಯ, ಅಣ್ಣಪ್ಪ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.