Thursday, September 19, 2024
Google search engine
Homeಅಂಕಣಗಳುಲೇಖನಗಳುರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಸಿಗದ ಪ್ರಾತಿನಿಧ್ಯ...!

ರಾಜ್ಯ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಸಿಗದ ಪ್ರಾತಿನಿಧ್ಯ…!

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ತಮ್ಮ ಸಚಿವ ಸಂಪುಟ ಪುನರ್‌ರಚಿಸುತ್ತಿದ್ದು, ಈ ಬಾರಿಯಾದರೂ ಜಿಲ್ಲೆಗೆ ಪ್ರಾತಿನಿಧ್ಯ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗುವುದು ಬಹುತೇಕ ನಿಶ್ಚಿತವಾಗಿದೆ.
ಈಗಾಗಲೇ ಸಂಭವನೀಯ ಸಚಿವರ ಪಟ್ಟಿಯ ಪ್ರಕಾರ ಶಿವಮೊಗ್ಗ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿರುವ ಬಿ.ಕೆ. ಸಂಗಮೇಶ್ ಹೆಸರು ಎಲ್ಲಿಯೂ ಕಂಡುಬರುತ್ತಿಲ್ಲ. ಇವರನ್ನು ಭೂಸೇನಾ ನಿಗಮದ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದು, ಸಚಿವ ಸಂಪುಟದಲ್ಲಿ ಇವರಿಗೆ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ರಾಜ್ಯ ಸರ್ಕಾರದ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನು ಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಿನ್ನೆಲೆಯಲ್ಲಿ ಮತ್ತು ಪಕ್ಷ ಸಂಘಟನೆಯ ಹಿನ್ನೆಲೆ ಯಲ್ಲಿ ಈ ಬಾರಿ ಜಿಲ್ಲೆಗೆ ಸಂಪುಟದಲ್ಲಿ ಆದ್ಯತೆ ಸಿಗುತ್ತದೆ ಎಂಬುದು ಎಲ್ಲರ ನಿರೀಕ್ಷೆ ಯಾಗಿತ್ತು. ಶಿವಮೊಗ್ಗ ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿ ದ್ದರೆ ಒಂದೇ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ.ಕೆ. ಸಂಗಮೇಶ್ ಭದ್ರಾವತಿಯ ಶಾಸಕರಾಗಿದ್ದಾರೆ.
ಏಕೈಕ ಶಾಸಕರಾಗಿರುವ ಬಿ.ಕೆ. ಸಂಗಮೇಶ್‌ರವರಿಗೆ ಈ ಬಾರಿ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಆದ್ಯತೆ ನೀಡುತ್ತಾರೆ ಎಂಬ ನಿರೀಕ್ಷೆ ಜಿಲ್ಲೆಯ ಜನತೆಯಲ್ಲಿತ್ತು. ಆದರೆ ಈಗಿರುವ ಮಾಹಿತಿ ಪ್ರಕಾರ ಸಂಗಮೇಶ್‌ರವರು ಸಚಿವರಾಗುವ ಸಾಧ್ಯತೆ ಇಲ್ಲವಾಗಿದೆ. ಶಿವಮೊಗ್ಗ ಜಿಲ್ಲೆ ಮೂವರು ಮುಖ್ಯಮಂತ್ರಿಗಳನ್ನು, ಇಬ್ಬರು ರಾಷ್ಟ್ರಕವಿ ಗಳನ್ನು ಹಾಗೂ ಮೂವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರನ್ನು ನೀಡಿದಂತಹ ಜಿಲ್ಲೆಯಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಪ್ರಾಕೃತಿಕವಾಗಿ ತನ್ನದೇ ಆದ ಛಾಪನ್ನು ಮೂಡಿಸಿರುವ ರಾಜ್ಯದ ಹೆಗ್ಗಳಿಕೆ ಜಿಲ್ಲೆಗಳಲ್ಲಿ ಶಿವಮೊಗ್ಗವೂ ಸಹ ಒಂದಾಗಿದೆ. ದುರಾದೃಷ್ಟವೆಂದರೆ ರಾಜ್ಯ ಸರ್ಕಾರದಲ್ಲಿ ಸರ್ಕಾರದ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವಂತಹ ಓರ್ವ ಸದಸ್ಯರಿಲ್ಲದಿರುವುದು ಶಿವಮೊಗ್ಗ ಜಿಲ್ಲೆಗೆ ಘೋರ ಅನ್ಯಾಯವಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಜೆಡಿಎಸ್, ಕಾಂಗ್ರೆಸ್ ಪಕ್ಷದ ಶಾಸಕರನ್ನು ಸಚಿವರನ್ನಾಗಿ ಮಾಡಿದರೆ ಜಿಲ್ಲೆಯಲ್ಲಿ ಆ ಪಕ್ಷ ಹೆಚ್ಚು ಸಂಘಟನೆಯಾಗುತ್ತದೆ ಎಂಬ ಮನಸ್ಥಿತಿ ಹೊಂದಿದ್ದರೆ ತಮ್ಮದೇ ಪಕ್ಷದ ಹಲವು ನಾಯಕರು ಜಿಲ್ಲೆಯಲ್ಲಿ ಇದ್ದಾರೆ. ಅವರನ್ನು ಮೇಲ್ಮನೆ ಸದಸ್ಯರನ್ನಾಗಿಸುವ ಮೂಲಕ ಸಂಪುಟದಲ್ಲಿ ಆದ್ಯತೆ ನೀಡಿ, ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬಹುದಾಗಿತ್ತು. ಅಲ್ಲದೆ, ತಮ್ಮ ಪಕ್ಷ ಸಂಘಟನೆ ಸಹ ಭದ್ರಗೊಳಿಸಿಕೊಳ್ಳ ಬಹುದಾಗಿತ್ತು. ಇದ್ಯಾವುದನ್ನೂ ಮಾಡದೇ ಹೊರ ಜಿಲ್ಲೆಯವರನ್ನು ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡುವ ಮೂಲಕ ಶಿವಮೊಗ್ಗ ಜಿಲ್ಲೆಯನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಗಳು ಕಡೆಗಣಿಸಿದೆ ಎಂಬ ಆರೋಪ ಪಕ್ಷದ ಕಾರ್ಯಕರ್ತರಲ್ಲಿ ಕೇಳಿಬರುತ್ತಿದೆ.
ಶಿವಮೊಗ್ಗ ಜಿಲ್ಲೆಯವರನ್ನೇ ಸಚಿವರನ್ನಾಗಿ ಮಾಡುವ ಮೂಲಕ ಅವರಿಗೇ ಜಿಲ್ಲೆಯ ಉಸ್ತುವಾರಿ ನೀಡಿದ್ದರೆ ಜಿಲ್ಲೆಯ ಸಮಸ್ಯೆಗಳು ಏನು ಎಂಬುದು ಅವರುಗಳಿಗೆ ಅರಿವಿರು ತ್ತಿತ್ತು. ಅವರು ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮಟ್ಟ ದಲ್ಲಿ ಸತತ ಪ್ರಯತ್ನ ನಡೆಸುತ್ತಿದ್ದರು. ಜಿಲ್ಲೆಯ ಜನತೆಯೂ ಸಹ ತಮ್ಮ ಸಚಿವರ ಬಳಿ ಸಮಸ್ಯೆಗಳನ್ನು ಹೇಳಿ ಕೊಳ್ಳಲು ಅನುಕೂಲವಾಗುತ್ತಿತ್ತು. ಇದೀಗ ಜಿಲ್ಲೆಯವರಿಗೆ ಸಂಪುಟದಲ್ಲಿ ಸ್ಥಾನ ಸಿಗದೇ ಇರುವುದರಿಂದ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವವರೇ ಇಲ್ಲವಾಗಿದೆ. ಇದರಿಂದಾಗಿ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬುದು ಎಲ್ಲೆಡೆ ಕೇಳಿಬರುತ್ತಿರುವ ಅಭಿಪ್ರಾಯವಾಗಿದೆ.
ಯಾವ ಉದ್ದೇಶದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ನ ಮುಖಂಡರು ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಿಲ್ಲ ಎಂಬುದು ಕುತೂಹಲದ ವಿಷಯವಾಗಿದೆ. ಈ ಬಾರಿಯಾದರೂ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ಇದು ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಅವನತಿಗೆ ಕಾರಣವಾದರೂ ಆಶ್ಚರ್ಯ ಪಡಬೇಕಿಲ್ಲ.
ಸದ್ಯದ ಮಾಹಿತಿಯ ಪ್ರಕಾರ ಸಂಗಮೇಶ್ ಸೇರಿದಂತೆ ಜಿಲ್ಲೆಯ ಯಾರೊಬ್ಬರಿಗೂ ಸಚಿವ ಸ್ಥಾನ ಸಿಗುವ ಬಗ್ಗೆ ಮುನ್ಸೂಚನೆ ಕಾಣುತ್ತಿಲ್ಲ. ಇದು ನಿಜವಾಗಿದ್ದೇ ಆದರೆ ಜಿಲ್ಲೆಗೆ ಘೋರ ಅನ್ಯಾಯವಾದಂತೆಯೇ ಸರಿ.
ಜಿ.ಸಿ.ಸೋಮಶೇಖರ್

RELATED ARTICLES
- Advertisment -
Google search engine

Most Popular

Recent Comments