ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸೌಧದ ಎದುರು 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವ ದಿನೇಶ್ ಗುಂಡೂರಾವ್, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.
ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.