ವೀರಶೈವ-ಲಿಂಗಾಯತ ಸಮಾಜ ಒಡೆಯಲು ಹೊರಟ ಕಾಂಗ್ರೆಸ್‌ಗೆ ಚುನಾವಣೆ ತಿರುಗುಬಾಣ

ಶಿವಮೊಗ್ಗ : ಇದೇ ತಿಂಗಳ ೧೨ ರಂದು ನಡೆಯಲಿರುವ ೧೫ನೇ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸ ಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದರು.
ಜಾಗೃತ ಮತದಾರರ ವೇದಿಕೆ ವತಿಯಿಂದ ಎನ್‌ಡಿವಿ ಹಾಸ್ಟೆಲ್ ಆವರಣದಲ್ಲಿ ಇಂದು ಆಯೋಜಿ ಸಿದ್ದ ಸ್ನೇಹಮಿಲನ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಕೇವಲ ೧೦ ದಿನಗಳು ಮಾತ್ರ ಬಾಕಿ ಇದೆ. ಆದ್ದರಿಂದ ಪಕ್ಷದ ಅಭಿಮಾನಿಗಳು ಇಂದಿನಿಂದಲೇ ತಮ್ಮ ಸ್ನೇಹಿತರು, ನೆಂಟರಿಷ್ಟರು, ಬಂಧು- ಬಾಂಧವರು ಹಾಗೂ ವಿವಿಧ ಸಮಾಜ ಮುಖಂಡರಿಗೆ ಮನವಿ ಮಾಡುವ ಮೂಲಕ ಕೆ.ಎಸ್. ಈಶ್ವರಪ್ಪನವರು ೨೦ ಸಾವಿರ ಮತಗಳ ಅಂತರದಿಂದ ಗೆಲ್ಲುವ ನಿಟ್ಟಿನಲ್ಲಿ ಶ್ರಮವಹಿಸಬೇಕು ಎಂದು ಹೇಳಿದರು.
ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಕಂಡುಬಂದಿದ್ದು, ಸಮೀಕ್ಷೆ ಗಳೆಲ್ಲ ಸುಳ್ಳಾಗಲಿವೆ. ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ ದಲ್ಲಿ ಬಂದ ಫಲಿತಾಂಶ ದಂತೆಯೇ ಇಲ್ಲಿಯೂ ಫಲಿತಾಂಶ ಬರಲಿದೆ ಎಂದು ವಿಶ್ವಾಸವಿದೆ ಎಂದರು.
ನಾನು ಮುಖ್ಯಮಂತ್ರಿಯಾಗುವು ದನ್ನು ತಪ್ಪಿಸಲು ವೀರಶೈವ, ಲಿಂಗಾ ಯಿತ ಧರ್ಮ ವಿಚಾರದ ಮೂಲಕ ಸಮಾಜ ಒಡೆಯಲು ಮುಂದಾದ ಕಾಂಗ್ರೆಸ್‌ಗೆ ಅದೇ ತಿರುಗುಬಾಣ ವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬಿಜೆಪಿ ವರಿಷ್ಟರು ಮೂರು ಸರ್ವೇಗಳನ್ನು ನಡೆಸಿದ್ದು ನಾನು ಕೂಡ ಅಭಿಪ್ರಾಯ ತಿಳಿಸಿದ್ದೆ. ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿ ಗಳನ್ನು ಆಯ್ಕೆ ಮಾಡಲಾಗಿದ್ದು, ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ.ಹಾಸನ ಜಿಲ್ಲೆಯಲ್ಲೂ ಮೂರ‍್ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲುವ ವಾತಾವರಣ ಕಂಡುಬಂದಿದೆ ಎಂದು ತಿಳಿಸಿದರು.
ಸಿದ್ಧರಾಮಯ್ಯ ಕಳಪೆ ಮುಖ್ಯಮಂತ್ರಿಯಾಗಿದ್ಧಾರೆ. ಕಳೆದ ಚುನಾವಣೆಯಲ್ಲಿ ನಮ್ಮ ತಪ್ಪಿನಿಂದ ಕಾಂಗ್ರೆಸ್‌ಗೆ ಲಾಭವಾಗಿದೆ. ಈ ಚುನಾವಣೆಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕೆಂಬುದು ರಾಜ್ಯದ ಜನರ ಆಶಯವಾಗಿದೆ ಎಂದರು.
ಮೇ ೧೮ ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಲಕ್ಷಾಂತರ ಜನರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅವರು ಸಂವಾದದಲ್ಲಿ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ,ಬಿ.ವೈ.ರಾಘವೇಂದ್ರ ಮೊದಲಾದವರು ಹಾಜರಿದ್ದರು.