Wednesday, September 18, 2024
Google search engine
Homeಅಂಕಣಗಳುಲೇಖನಗಳು೧೦೫ ತಾಲೂಕುಗಳಲ್ಲಿ ೨೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆ : ಡಿಕೆಶಿ

೧೦೫ ತಾಲೂಕುಗಳಲ್ಲಿ ೨೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆ : ಡಿಕೆಶಿ

ಶಿವಮೊಗ್ಗ : ರಾಜ್ಯದ ೧೦೫ ತಾಲೂಕುಗಳಲ್ಲಿ ೨೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಂದು ನಗರದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಮೆಸ್ಕಾಂನ ವಿದ್ಯುತ್ ವಿತರಣಾ ಕೇಂದ್ರ, ಶಿವಮೊಗ್ಗ ವಲಯ ಕಛೇರಿ ಮತ್ತು ಇತರ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಕೇಂದ್ರಗಳಲ್ಲಿ ಉತ್ಪತ್ತಿಯಾಗುವ ವಿದ್ಯುತ್ತನ್ನು ಅಲ್ಲಿನ ರೈತರಿಗೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಆರಂಭದಲ್ಲಿ ಇಂಧನ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಅನೇಕ ಹಿರಿಯರು ಹಾಗೂ ಸ್ನೇಹಿತರು ಈ ಖಾತೆಯನ್ನು ನಿಭಾಯಿಸುವುದು ಕಷ್ಟ, ಇದರ ಜವಾಬ್ದಾರಿ ಬೇಡ ಎಂಬ ಸಲಹೆ ನೀಡಿದ್ದರು. ಆದರೆ ಅವರ ಸಲಹೆಯನ್ನು ಸವಾಲಾಗಿ ಸ್ವೀಕರಿಸಿ ಇಂಧನ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದರು.
ವಿಶ್ವದಲ್ಲಿಯೇ ಪ್ರಥಮ ಬಾರಿಗೆ ತುಮಕೂರು ಜಿಲ್ಲೆ ಪಾವಗಡದಲ್ಲಿ ೧೩ ಸಾವಿರ ಎಕರೆ ಪ್ರದೇಶದಲ್ಲಿ ಭೂಮಿ ಖರೀದಿಸದೇ ಆ ಭೂಮಿಯ ಮಾಲೀಕನಾಗಿರುವ ರೈತನೊಂದಿಗೆ ಒಪ್ಪಂದ ಮಾಡಿಕೊಂಡು ೨೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿ ಸುವ ಸೋಲಾರ್ ಪಾರ್ಕ್‌ನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಮುಖ್ಯಮಂತ್ರಿಗಳು ನಿನ್ನೆ ಚಾಲನೆ ನೀಡಿದ್ದಾರೆ ಎಂದರು.
ಗ್ರಾಹಕರ ರಕ್ಷಣೆಗಾಗಿ ನಮ್ಮ ಇಲಾಖೆ ಅತ್ಯಂತ ಉತ್ತಮ ರೀತಿ ಯಲ್ಲಿ ಕಾರ್ಯ ಮಾಡುತ್ತಿದೆ. ೭೩೫ ಹುದ್ದೆಗಳಿಗೆ ನೇಮಕಾತಿ ಮಾಡಲಾ ಗಿದೆ ಎಂದ ಅವರು, ಇಲಾಖೆಯ ನೌಕರರಿಗೆ ಶೇ.೨೬ರಷ್ಟು ವೇತನ ಏರಿಕೆ ಮಾಡಲಾಗುತ್ತಿದ್ದು, ಇದಕ್ಕೆ ನಾಳೆಯೇ ಆದೇಶ ಹೊರಡಿಸ ಲಾಗುವುದು ಎಂದರು.
ಈ ಹಿಂದೆ ಇಲ್ಲಿನ ಶಾಸಕರಾಗಿದ್ದ ಕೆ.ಎಸ್.ಈಶ್ವರಪ್ಪ ಇಂಧನ ಖಾತೆಯನ್ನು ನಿಭಾಯಿಸಿದ್ದರು. ಅವರು ಈಗ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಎಂದೂ ಸಹ ಅವರು ಸದನದಲ್ಲಿ ನನ್ನ ಖಾತೆಯ ವಿಷಯಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿ ಸಿಲ್ಲ. ಇದಕ್ಕಿಂತ ಅಭಿನಂದನೆ ಬೇಕೇ ಎಂದು ಸಭಿಕರನ್ನು ಪ್ರಶ್ನಿಸಿದರು.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಉತ್ಸಾಹಿ ಯುವಕ ಡಿ.ಕೆ.ಶಿವಕುಮಾರ್ ಇಂಧನ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಮೆಸ್ಕಾಂ ನಿರ್ದೇಶಕ ಮೋಹನ್, ಕಾಡಾ ಅಧ್ಯಕ್ಷ ಸುಂದ ರೇಶ್, ಸೂಡಾಧ್ಯಕ್ಷ ಇಸ್ಮಾಯಿಲ್ ಖಾನ್, ವಿಶ್ವನಾಥ್ ಕಾಶಿ, ಯೋಗೀಶ್, ಎಸ್.ಪಿ.ಶೇಷಾದ್ರಿ ಮೊದಲಾದವರಿದ್ದರು.

RELATED ARTICLES
- Advertisment -
Google search engine

Most Popular

Recent Comments