ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಇಂದು ವಿಧಿವಶರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.
ಪುತ್ರಿಯ ನಿಧನದ ಸುದ್ದಿ ತಿಳಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.