Wednesday, September 18, 2024
Google search engine
Homeಇ-ಪತ್ರಿಕೆಹೋರಾಟಗಾರರ ಪರಿಶ್ರಮದ ಫಲವೆ ಸ್ವಾತಂತ್ರ್ಯ: ಜಿಲ್ಲಾಡಳಿತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಅಭಿಪ್ರಾಯ

ಹೋರಾಟಗಾರರ ಪರಿಶ್ರಮದ ಫಲವೆ ಸ್ವಾತಂತ್ರ್ಯ: ಜಿಲ್ಲಾಡಳಿತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಅಭಿಪ್ರಾಯ

ಶಿವಮೊಗ್ಗ : ನಮ್ಮ ಭಾರತ ದೇಶವನ್ನು ವಿದೇಶಿಯರಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಭಾರತೀಯರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಆ ಎಲ್ಲಾ ಸ್ವಾತಂತ್ರ್ಯ ವೀರರಿಗೆ ಅನಂತ ನಮನಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಗುರುವಾರ ನಗರದ ಡಿ.ಎ.ಆರ್ ಮೈದಾನದಲ್ಲಿ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಸುಭಾಶ್‍ಚಂದ್ರ ಬೋಸ್, ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಈ ನೆಲದ ಅನೇಕ ಹೋರಾಟಗಾರರ ಪರಿಶ್ರಮದ ಫಲ ಇಂದಿನ ಸ್ವಾತಂತ್ರ್ಯ ದಿನಾಚರಣೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಐವರು ವೀರಸೇನಾನಿಗಳು ನೇಣಿಗೆ ಶರಣಾಗಿ ಹುತಾತ್ಮರಾಗಿದ್ದು ನಿಜಕ್ಕೂ ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ. ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಪೂಜ್ಯ ತಂದೆಯವರಾದ ಶ್ರೀ ಎಸ್.ಬಂಗಾರಪ್ಪನವರು ಸೇರಿದಂತೆ ನಾಲ್ಕು ಜನ ಮುಖ್ಯಮಂತ್ರಿಗಳನ್ನು ನೀಡಿದ್ದು, ಅನೇಕ ಕ್ಷೇತ್ರಗಳಲ್ಲಿನ ಅಸಂಖ್ಯಾತ ಪ್ರತಿಭಾವಂತರು, ಪ್ರಸಿದ್ದರು, ಉದಯಿಸಿದ ಪುಣ್ಯಭೂಮಿ ಶಿವಮೊಗ್ಗ ಜಿಲ್ಲೆ ಎಂದರು.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು, ರೈತರಲ್ಲಿ ಮಂದಹಾಸ ಮೂಡಿದೆ. ಭಾರೀ ಮಳೆಯಿಂದಾಗಿ ಜನ-ಜಾನುವಾರುಗಳು, ಮನೆಗಳು ಹಾನಿಗೊಳಗಾಗಿವೆ. ಹಾನಿಗೊಳಗಾಗಿರುವ ಮನೆಗಳ ಮಾಲೀಕರಿಗೆ ತಕ್ಷಣದ ಪರಿಹಾರ ಕ್ರಮವಾಗಿ ಅಗತ್ಯ ನೆರವನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂ ಮತ್ತು ಸಾಕ್ಸ್ಗಳನ್ನು ಪೂರೈಸಲಾಗಿದೆ. ಈಗಾಗಲೇ 12000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 2015 ರಿಂದ 2020 ನೇ ಸಾಲಿನ ವರೆಗೆ ಅನುದಾನಿತ ಶಾಲಾ ಕಾಲೇಜುಗಳಲ್ಲಿ 5 ಸಾವಿರ ಶಿಕ್ಷರ ನೇಮಕಾತಿ ಅನುಮತಿ ನೀಡಲಾಗಿದೆ. ಖಾಲಿ ಇರುವ 10 ಸಾವಿರ ಖಾಯಂ ಶಿಕ್ಷರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.

ಮಕ್ಕಳಲ್ಲಿನ ಪೌಷ್ಠಿಕತೆಯನ್ನು ಹೆಚ್ಚಿಸಲು ವಾರದ ಮೂರು ದಿನ ಹಾಲಿನೊಂದಿಗೆ ರಾಗಿಮಾಲ್ಟ್ ಹಾಗೂ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಪ್ರತಿದಿನ ಬಿಸಿಯೂಟ, ಮೊಟ್ಟೆ, ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲಾಗುತ್ತಿದೆ. ಅಜೀಂ ಪ್ರೇಮ್‍ಜಿ ಫೌಂಡೇಶನ್‍ನ ಸಹಯೋಗದೊಂದಿಗೆ ಮುಂದಿನ 3 ವರ್ಷಗಳ ಅವಧಿಗೆ ವಾರದ 6 ದಿನಗಳು ಮೊಟ್ಟೆ ವಿತರಿಸುವ ಯೋಜನೆ ಪ್ರಾರಂಭಿಸಲಾಗಿದೆ. 10 ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದೆ ಸರಿಯದಂತೆ ಹಾಗೂ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯಕವಾಗುವಂತೆ ಮೂರು ಹಂತದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಅಭಿಪ್ರಾಯ ಮೂಡಿದೆ ಎಂದರು.

ಶರಾವತಿ ಹಾಗೂ ಇತರೆ ಯೋಜನೆಗಳ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್‍ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಜಿಲ್ಲೆ ಮತ್ತು ಸರ್ಕಾರದ ಹಂತದಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಂತ್ರಸ್ಥರ ಪರವಾಗಿ ಸುಪ್ರಿಂಕೋರ್ಟಿನಲ್ಲಿ ಸಮರ್ಥವಾಗಿ ವಾದ ಮಂಡಿಸಲು ಹಿರಿಯ ವಕೀಲರೊಬ್ಬರನ್ನು ಈಗಾಗಲೇ ನೇಮಿಸಲಾಗಿದೆ. ವಿಧಾನ ಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

ವಿವಿಧ ತುಕಡಿಗಳನ್ನಿಡಿದ ಆಕರ್ಷಣೀಯ ಪಥಸಂಚನ ಸಾಗಿದವು. ಸಾಮೂಹಿಕ ವ್ಯಾಯಾಮ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಯಿತು.ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ 5 ಜನ ಅಧಿಕಾರಿ/ಸಿಬ್ಬಂದಿಗಳು, ಅಲ್ಪಸಂಖ್ಯಾತ ಇಲಾಖೆಯ ಅಡಿ ಬರುವ ಪ್ರೌಢಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅಂಗಾಂಗ ದಾನ ಮಾಡಿದ ದಿ.ಉಲ್ಲಾಸ್, ದಿ.ಲಲಿತಮ್ಮ ಕುಟುಂಬ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೆÇಲೀಸ್ ವರಿμÁ್ಟಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಸಿಇಓ ಎನ್.ಹೇಮಂತ್, ಶಾಸಕಿ ಬಲ್ಕೀಶ್ ಬಾನು, ಜನಪ್ರತಿನಿಧಿಗಳು, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments