Sunday, September 8, 2024
Google search engine
Homeಅಂಕಣಗಳುಲೇಖನಗಳುಪ್ರತಿಯೊಬ್ಬರಿಗೂ ಸೂರು ಒದಗಿಸಲು ಸರ್ಕಾರ ಬದ್ಧ : ಕಾಗೋಡು

ಪ್ರತಿಯೊಬ್ಬರಿಗೂ ಸೂರು ಒದಗಿಸಲು ಸರ್ಕಾರ ಬದ್ಧ : ಕಾಗೋಡು

ಶಿವಮೊಗ್ಗ : ಜಿಲ್ಲೆಯಲ್ಲಿ ವಾಸಿ ಸುವ ನಿವೇಶನ ರಹಿತ ಹಾಗೂ ವಸತಿ ರಹಿತ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ಕಳೆಯುವಂತಾಗಲು ಸೂಕ್ತ ವಾಗುವಂತೆ ವಸತಿ ಸೌಲಭ್ಯ ಕಲ್ಪಿ ಸಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಇಂದು ಹೊಸನಗರದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ದಾಗಿ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳಲ್ಲಿ ೧೯೭ ಫಲಾನು ಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಆಶ್ರಯ ನಿವೇಶನಗಳನ್ನು ಅರ್ಹರಿಗೆ ಒದಗಿಸಲು ಜಮೀನು ನೀಡಲಾಗುತ್ತಿದೆ. ಸಾಗರ ಪುರಸಭೆ ವ್ಯಾಪ್ತಿಯಲ್ಲಿ ೧೫ಎಕರೆ, ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಕಾರ್ಗಲ್ ಪಟ್ಟಣ ಪಂಚಾ ಯಿತಿ ವ್ಯಾಪ್ತಿಯಲ್ಲಿ ಒಂಬತ್ತುವರೆ ಎಕರೆ ಜಮೀನನ್ನು ಗುರುತಿಸಿ ಒದಗಿಸಲಾಗಿದೆ ಎಂದರು.
ಈಗಾಗಲೇ ನಿವೇಶನ ವಿತರಿ ಸಲಾಗಿರುವ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಅಗತ್ಯ ಹಣಕಾ ಸಿನ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಈ ನಿವೇಶನ ಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ ಮುಂತಾದವ ಮೂಲಭೂತ ಸೌಕರ್ಯ ಕಲ್ಪಿಸಲು ೬.೦೫ಕೋಟಿ ರೂ.ಗಳ ಆರ್ಥಿಕ ನೆರವು ಹಾಗೂ ನಿವೇಶನ ನೀಡಿರುವ ೧೯೭ ಫಲಾನುಭವಿಗಳಿಗೆ ಮನೆ ನಿರ್ಮಿಸಲು ನೆರವು ಒದಗಿಸಲು ಕೋರಿ ಪಟ್ಟಣ ಪಂಚಾಯತಿ ವತಿ ಯಿಂದ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಕಲಗೋಡು ರತ್ನಾಕರ್, ಪ.ಪಂ. ಅಧ್ಯಕ್ಷ ಹಾಲಗದ್ದೆ ಉಮೇಶ್ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments