Saturday, December 14, 2024
Google search engine
Homeಇ-ಪತ್ರಿಕೆಪಂಚೆ ಧರಿಸಿದ ರೈತನಿಗೆ ಪ್ರವೇಶ ನಿರಾಕರಿಸಿದ ಜಿ.ಟಿ.ಮಾಲ್ 7 ದಿನ ಬಂದ್

ಪಂಚೆ ಧರಿಸಿದ ರೈತನಿಗೆ ಪ್ರವೇಶ ನಿರಾಕರಿಸಿದ ಜಿ.ಟಿ.ಮಾಲ್ 7 ದಿನ ಬಂದ್

ಬಿಬಿಎಂಪಿ‌ ಅಧಿಕಾರಿಗಳು ಜಿಟಿ ವರ್ಲ್ಡ್​ ಮಾಲ್​ನ ಎಲ್ಲಾ ಗೇಟ್ ಗಳನ್ನೂ ಬಂದ್ ಮಾಡಿಸಿದ್ದಾರೆ

ಬೆಂಗಳೂರು: ಹಾವೇರಿ ಮೂಲದ ರೈತರೊಬ್ಬರು ಪಂಚೆಯುಟ್ಟು ಬಂದ ಕಾರಣಕ್ಕೆ ಪ್ರವೇಶ ನಿರಾಕರಣೆ ಮಾಡಿದ ಬೆಂಗಳೂರಿನ ಜಿ ಟಿ ಮಾಲ್ ಗೆ 7 ದಿನ ಬಂದ್‌ ಮಾಡಲು ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ.‌

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಕಾನೂನಿನಲ್ಲಿ ಶಿಕ್ಷೆಗೆ ಅವಕಾಶವಿರುವುದರಿಂದ ಮಾಲ್‌ ಅನ್ನು 7 ದಿನ ಬಂದ್‌ ಮಾಡಲು ಯೋಚಿಸಿದ್ದೇವೆ ಎಂದರು.

ಇಂದು ಬೆಳಗ್ಗೆ ಸದನದಲ್ಲಿ ಜಿ.ಟಿ ಮಾಲ್ ನಲ್ಲಿ ರೈತನಿಗೆ ಅವಮಾನ ಆದ ವಿಚಾರ ಚರ್ಚೆಗೆ ಕಾರಣವಾಗಿದೆ.  ಈ  ವಿಚಾರವಾಗಿ ಸ್ಪೀಕರ್ ಯು.ಟಿ.ಖಾದರ್ ಗರಂ ಆದರು.

ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.

ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡ್ತಾರೆ, ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡ್ತಾರೆ. ಆದರೆ, ಬೇರೆಯವರಿಗೆ ಆ ರೂಲ್ಸ್ ಇಲ್ವಾ ಎಂದು ಸಚಿವ ಬೈರತಿ ಸುರೇಶ್ ಪ್ರಶ್ನಿಸಿದರು. ಅಲ್ಲದೆ, ಸಚಿವ ಬೈರತಿ ಸುರೇಶ್, 7 ದಿನಗಳ ಕಾಲ‌ ಮಾಲ್ ಮುಚ್ಚಿಸುತ್ತೇವೆ ಎಂದರು.

ಈ ಘಟನೆ ಮೊನ್ನೆ ಮಂಗಳವಾರ ನಡೆದಿದ್ದು ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.

ಜಿಟಿ ವರ್ಲ್ಡ್ ಮಾಲ್ ಬಂದ್

ಸರ್ಕಾರದ ಸೂಚನೆಯಂತೆ ಬಿಬಿಎಂಪಿ‌ ಅಧಿಕಾರಿಗಳ ಗುರುವಾರ ಜಿಟಿ ವರ್ಲ್ಡ್​ ಮಾಲ್​ನ ಎಲ್ಲಾ ಗೇಟ್ ಗಳನ್ನೂ ಬಂದ್ ಮಾಡಿಸಿದ್ದಾರೆ. ಮಾರ್ಷಲ್​ಗಳ ಜೊತೆ ಬಂದಿದ್ದ ಬಿಬಿಎಂಪಿ ಅಧಿಕಾರಿಗಳು ಬಂದ್​ ಮಾಡಿಸಲು ಮುಂದಾಗಿದ್ದಾರೆ. ಕೊನೆಗೆ ತಾವೇ ಕ್ಲೋಸ್ ಮಾಡುವುದಾಗಿ ಹೇಳಿದ ಮಾಲ್ ಆಡಳಿತ ಮಂಡಳಿ ಒಪ್ಪಿಕೊಂಡಿದೆ. ಮಾಲ್​ನ ಸೆಕ್ಯುರಿಟಿ ಗಾರ್ಡ್​ಗಳು ಇದೀಗ ಮಾಲ್ ಎಲ್ಲಾ ಎಂಟ್ರಿ ಗೇಟ್ ಗಳನ್ನು ಬಂದ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments