ತೀರ್ಥಹಳ್ಳಿ: ರಾಷ್ಟ್ರೀಯ ಪಕ್ಷ ಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ರಾಜ್ಯದ ಜನರ ಸಮಸ್ಯೆಯ ಬಗ್ಗೆ ಮಾತನಾಡದೇ ಕೇವಲ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಇಂದು ತಾಲೂಕಿನ ಹೊಸಮನೆ ಗ್ರಾಮದಲ್ಲಿ ರೈತ ಸೋಮಪ್ಪ ರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದ ನಂತರ, ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ರಾಷ್ಟ್ರೀಯ ಪಕ್ಷವಾಗಿ ಕೃಷಿ ವಿಷಯಗಳ ಬಗ್ಗೆ ಮಾತನಾಡುವ ಬದಲು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದರಲ್ಲಿಯೇ ಕಾಲ ಹರಣ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ರೈತರ ಸಮಸ್ಯೆ ಸಾಕಷ್ಟಿದೆ. ಅದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಒಂದೇ ಒಂದು ಮಾತನ್ನು ಆಡುತ್ತಿಲ್ಲ. ರಾಜ್ಯ ಸರ್ಕಾರ ಹಗರಣಗಳನ್ನು ಎತ್ತಿ ಹಿಡಿಯುವ ಬಗ್ಗೆ ಮತ್ತು ಅದನ್ನು ಹುಡುಕುವುದರಲ್ಲಿ ತಮ್ಮ ಕಾಲಹರಣ ಮಾಡುತ್ತಿವೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ ಎಂದರು.
ಇದೀಗ ಬಿಜೆಪಿ ನಾಯಕರು ಸ್ಲಂಗಳಲ್ಲಿ ವಾಸ್ತವ್ಯ ಹೂಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಎರಡಂತಸ್ತಿನ ಮನೆಯಲ್ಲಿ ಮಲಗಿ ಎದ್ದು ಬಂದರೆ ಅದು ಸ್ಲಂ ವಾಸ್ತವ್ಯ ಹೇಗೆ ಆಗುತ್ತದೆ ಎಂದ ಅವರು, ಈ ಹಿಂದೆ ಅಧಿಕಾರದಲ್ಲಿದ್ದಾಗ ಬಿಜೆಪಿ ಯವರು ಸ್ಲಂಗಳ ಅಭಿವೃದ್ಧಿಗೆ ಮತ್ತು ಅಲ್ಲಿನ ಜನರ ಅಭಿವೃದ್ಧಿಗಾಗಿ ಏನು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿ ದ್ದರು ಎಂದು ಪ್ರಶ್ನಿಸಿದರು.
ಇದೀಗ ಬಿಜೆಪಿ ನಾಯಕರಿಗೆ ಸ್ಲಂಗಳ ಬಗ್ಗೆ ಜ್ಞಾನೋದಯವಾಗಿದೆ. ಅಲ್ಲಿನ ಜನರ ಬಗ್ಗೆ ಕಾಳಜಿ ವಹಿಸು ವಂತಹ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದ ಅವರು, ಕಾಂಗ್ರೆಸ್‌ನವರು ಕೇವಲ ಪ್ರಧಾನಿ ನರೇಂದ್ರ ಮೋದಿ ಯವರನ್ನು ಟೀಕಿಸಲು ಕಾಲಹರಣ ಮಾಡುತ್ತಿದ್ದಾರೆಯೇ ಹೊರತು ರಾಜ್ಯದ ಜನರ ಮತ್ತು ಬಡವರ ಹಾಗೂ ರೈತರ ಬಗ್ಗೆ ಯಾವುದೇ ಚಕಾರ ಎತ್ತುತ್ತಿಲ್ಲ ಎಂದು ಆರೋಪಿ ಸಿದರು.
ರಾಜ್ಯಕ್ಕೆ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ಗಾಂಧಿ ಆಗಮಿಸಿ ದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ರುವ ರೈತರ ಸಮಸ್ಯೆ ಬಗ್ಗೆ ಇದುವ ರೆಗೂ ಒಂದೇ ಒಂದು ಮಾತನ್ನು ಆಡಿಲ್ಲ. ಅಡಿಗೆ ಬೆಳೆಗಾರರ ಸಮಸ್ಯೆ ಯನ್ನು ಆಲಿಸುವಂತಹ ಕಾರ್ಯವಾ ಗಿಲ್ಲ. ಈ ರೀತಿಯಾದರೆ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಏನು ಅನುಕೂಲ ವಾಗಲಿದೆ ಎಂದು ಪ್ರಶ್ನಿಸಿದರು.
ಹಲವಾರು ವರ್ಷಗಳಿಂದ ಸಾಗು ವಳಿ ಮಾಡುತ್ತಿದ್ದ ರೈತರನ್ನು ಒಕ್ಕಲೆ ಬ್ಬಿಸುವಂತಹ ಕರ್ಯ ನಡೆಯುತ್ತಿದೆ. ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಇವರುಗಳ ಸಮಸ್ಯೆಗಳ ಬಗ್ಗೆ ಗಮನಹರಿಸಲಿದೆ ಎಂದ ಅವರು, ಈ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದ ಜನತೆ ಜೆಡಿಎಸ್‌ಗೆ ಅವಕಾಶ ಮಾಡಿ ಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರು ಗಳಾದ ಮಧು ಬಂಗಾರಪ್ಪ, ಶಾರದಾ ಪೂರ‍್ಯನಾಯ್ಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಡಾ. ಆರ್.ಎಂ.ಮಂಜು ನಾಥಗೌಡ, ಮದನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದಾದ ನಂತರ ತೀರ್ಥಹಳ್ಳಿ ಪಟ್ಟಣದಲ್ಲಿ ಬಹಿರಂಗ ಸಭೆ ನಡೆಯಿತು.