Thursday, September 19, 2024
Google search engine
Homeಇ-ಪತ್ರಿಕೆಆಶ್ರಯ ಮನೆಗಳಿಗಾಗಿ ಹಕ್ಕೂತ್ತಾಯ: ಸರ್ಕಾರಕ್ಕೆ ಕೆಎಸ್‌ ಈ ಎಚ್ಚರಿಕೆ ರವಾನೆ

ಆಶ್ರಯ ಮನೆಗಳಿಗಾಗಿ ಹಕ್ಕೂತ್ತಾಯ: ಸರ್ಕಾರಕ್ಕೆ ಕೆಎಸ್‌ ಈ ಎಚ್ಚರಿಕೆ ರವಾನೆ

ಶಿವಮೊಗ್ಗ:  ಆಶ್ರಯ ಬಡಾವಣೆಯ ಎಲ್ಲಾ ಮನೆಗಳನ್ನು ಪೂರ್ಣಗೊಳಿಸಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಹಾಗೆಯೇ ಕಟ್ಟಡ ಕಾರ್ಮಿಕರಿಗೆ ನೀಡಾಬೇಕಾದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಬಿಡುಗಡೆ ಮಾಡಬೇಕೆಂಬುದು ಸೇರಿದಂತೆ ವಿವಿಧ ಮೂಲಭೂತ ಸಮಸ್ಯೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ರಾಷ್ಟ್ರಭಕ್ತರ ಬಳಗವು ನಗರದಲ್ಲಿ ಭರ್ಜರಿ ಪ್ರತಿಭಟನೆ ನಡೆಸಿತು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯೂ ಮಹಾನಗರ ಪಾಲಿಕೆಯವರೆಗೆ ನಡೆಯಿತು. ಅಲ್ಲಿ ಪ್ರತಿಭಟನಾ ಧರಣಿ ನಡೆಸಿ, ವಿವಿಧ ಬೇಡಿಕೆಗಳ ಹಕ್ಕೋತ್ತಾಯ ಮಂಡಿಸಲಾಯಿತು. ಹಲವು ಬೇಡಿಕೆಗಳ ಹಕ್ಕೊತ್ತಾಯದ ಮನವಿಯನ್ನು ಪಾಲಿಕೆ ಆಯುಕ್ತರಿಗೆ ಸಲ್ಲಿಸಲಾಯಿತು.
 
ಮನವಿ ಸಲ್ಲಿಕೆಗೂ ಮುನ್ನ ರಾಷ್ಟ್ರ ಭಕ್ತರ ಬಳಗದ ಸಂಚಾಲಕರೂ ಆದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ  ಮಾತನಾಡಿ, ಗೋವಿಂದಾಪುರ ಆಶ್ರಯ ಬಡಾವಣೆಯ ಎಲ್ಲಾ ಮನೆಗಳನ್ನು ಪೂರ್ಣಗೊಳಿಸಿ ಅಗತ್ಯ ಮೂಲ ಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ರಸ್ತೆ ಹಾಗೂ ನಗರ ಸಾರಿಗೆ ವ್ಯವಸ್ಥೆ, ಬೀದಿ ದೀಪ ವ್ಯವಸ್ಥೆ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಬೇಕು. ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ಹಿಂಪಡೆದಿದ್ದು, ಕೂಡಲೇ ಮರುಬಿಡುಗಡೆ ಮಾಡಿ ಬಾಕಿ ಇರುವ ಅನುದಾನಗಳಿಗೆ ಉಪಯೋಗಿಸಬೇಕು. ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ಕಲುಷಿತ ಕುಡಿಯುವ ನೀರಿನ ಸರಬರಾಜು, ಹದಗೆಟ್ಟ ರಸ್ತೆ, ಕಸವಿಲೇವಾರಿಯಲ್ಲಿನ ವಿಳಂಬ ಹಾಗೂ ಕುಂಠಿತಗೊಂಡಿರುವ ಪಾಲಿಕೆಯ ಅಭಿವೃದ್ಧಿ ಕಾರ್ಯಗಳಿಗೆ ಮರುಜೀವ ನೀಡಲು ಕೂಡಲೇ ಪಾಲಿಕೆ ಚುನಾವಣೆಯನ್ನು ನಡೆಸಿ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಗೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಈ.ವಿಶ್ವಾಸ್, ಶಂಕರ್‌ಗನ್ನಿ, ಎಂ.ಶಂಕರ್, ಕೆ.ಈ.ಕಾಂತೇಶ್, ಮಹಾಲಿಂಗಶಾಸ್ತ್ರಿ, ಮಂಜುನಾಥ್, ಬಾಲು, ಶಂಕರ್ ಹಾಗೂ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು, ಆಶ್ರಯ ಬಡಾವಣೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments