ಶಿವಮೊಗ್ಗ: ಹಾವೇರಿಯಲ್ಲಿ ಹೈವೆ ಮೇಲೆ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್‌ವೊಂದು ಡಿಕ್ಕಿ ಹೊಡೆದು ೧೩ ಜನರ ಸಾವಿಗೆ ಕಾರಣವಾಗಿದ್ದ ಘಟನೆ ನಡೆದು 10 ದಿನಗಳಾಗಿದ್ದು, ಇಂದು ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತರವರು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ್ದಾರೆ.ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಈ ಘಟನೆ ನಮಿಗೆ ಜೀರ್ಣಿಸಲಾಗುವುದಿಲ್ಲ. ಭಗವಂತ ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದರು.
ಶಿವರಾಜ್‌ಕುಮಾರ್ ಮಾತನಾಡಿ, ಇಂತಹ ಸಂದರ್ಭದಲ್ಲಿ ಎಲ್ಲರೂ ಸಹಾಯ ಮಾಡಬಹುದು. ಆದರೆ ಸಮಧಾನ ಮಾಡುವುದು ಕಷ್ಟ. ಈ ದುರ್ಘಟನೆಯ ನೆನಪು ಸದಾ ಕಾಡುತ್ತಿರುತ್ತದೆ. ಕುಟುಂಬದ ಮಕ್ಕಳಿಗೆ ಮುಂದಿನ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಕೂಡ ನೆರವು ನೀಡುವ ಭರವಸೆ ನೀಡುತ್ತಿದ್ದೇನೆ ಎಂದರು.
ಈ ಹಿಂದೆ ನಟ ಶಿವರಾಜ್ ಕುಮಾರ್ ದಂಪತಿಗಳು ಘೋಷಿಸಿದಂತೆ ಮೃತರಿಗೆ ತಲಾ ಒಂದು ಲಕ್ಷ ರೂ. ಹಣವನ್ನೇ ನೀಡಿದರು. 13 ಜನರು ಅಪಘಾತದಲ್ಲಿ ಮೃತರಾಗಿದ್ದು 13 ಲಕ್ಷದ ರೂ ನೆರವು ನೀಡಲಾಯಿತು. ಈ ಹಣವನ್ನ ಮೃತ ವಿಶಾಲಾಕ್ಷಿ ನಾಗೇಶ್ ಕುಟುಂಬದವರಿಗೆ ನೀಡಲಾಯಿತು.
ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಘೋಷಿಸಲಾಗಿತ್ತು. ಅದರಲ್ಲಿ ಇಬ್ವರು ಗುಣಮುಖರಾದರೂ ಇನ್ನಿಬ್ಬರ ಪರಿಸ್ಥಿತಿ ಗಂಭೀರವಾಗಿಯೇ ಇದೆ. ಈ ವೇಳೆ ಭದ್ರಾವತಿಯ ಶಾಸಕ ಸಂಗಮೇಶ್ವರ್ ಕೂಡ ತಲಾ 50 ಸಾವಿರ ನೆರವು ನೀಡಿ, ಶಿವರಾಜ್‌ಕುಮಾರ್ ದಂಪತಿಗಳಿಗೆ ಸಾಥ್ ನೀಡಿದರು.