Tuesday, July 23, 2024
Google search engine
Homeಇ-ಪತ್ರಿಕೆಮಂಡ್ಯ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ ಸಂಸದರಾಗಿ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್​.ಡಿ ಕುಮಾರಸ್ವಾಮಿ ಇಂದು ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಪ್ರಧಾನಿ ಮೋದಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ನಂತರ ಹೆಚ್.ಡಿ ಕುಮಾರಸ್ವಾಮಿ ಸೇರಿ ಇತರ ಸಂಸದರು ಮತ್ತು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಲೋಕಸಭಾ ಚುನಾವಣೆ 2024ರಲ್ಲಿ ಹೆಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ​​ ‘ಸ್ಟಾರ್’ ಚಂದ್ರು ವಿರುದ್ಧ 2 ಲಕ್ಷ 84 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.

RELATED ARTICLES
- Advertisment -
Google search engine

Most Popular

Recent Comments