ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ರೇವಣ್ಣ ಏಕಾದಶಿ ಪ್ರಯುಕ್ಚತ ಇಂದು ಉಪವಾಸದಲ್ಲಿದ್ದರು. ತಮ್ಮ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ್ದರು.
ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಇದರಿಂದ ಅವರ ಪಕ್ಕೆಲುಬುಗೆ ಪೆಟ್ಟು ಬಿದ್ದಿದೆ. ತೀವ್ರ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣ ಅವರಿಗೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.
ಚಿಕಿತ್ಸೆ ಪಡೆದು ಕೊಂಚ ಹೊತ್ತು ವಿಶ್ರಮಿಸಿದ ಬಳಿಕ ರೇವಣ್ಣ ಬೆಂಗಳೂರು ಕಡೆ ಹೊರಟರೆಂದು ವರದಿಯಾಗಿದೆ.