Tuesday, July 23, 2024
Google search engine
Homeಇ-ಪತ್ರಿಕೆಸಾಗರ: ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ಸಾಗರ: ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ಶಿವಮೊಗ್ಗ: ಮಳೆಗಾಲ ಶುರುವಾಗುತ್ತಿದ್ದಂತೆ ಕರ್ನಾಟಕದ ಹಲವು ಕಡೆ ಡೆಂಗ್ಯೂ ಪ್ರಕರಣಗಳೂ ವರದಿಯಾಗುತ್ತಿವೆ. ಮಳೆ ನೀರು ನಿಂತು ಸೊಳ್ಳೆಗಳ ಪ್ರಮಾಣವೂ ಅಧಿಕವಾಗುತ್ತಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಅಧಿಕವಾಗಿದ್ದು. ರೋಗಗಳೂ ಕೂಡ ಶುರುವಾಗಿವೆ. ಇದಕ್ಕೆ ಜನರೂ ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶಗಳೂ ಹೆಚ್ಚಾಗಿವೆ. ಮಳೆಗಾಲದ ಪ್ರಮುಖ ಕಾಯಿಲೆಯಾದ ಡೆಂಗ್ಯೂಗೆ ಸಿಲುಕಿರುವ ಹಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಡೆಂಗ್ಯೂಗೆ ಬಲಿಗೆ ಬಲಿಯಾದ ಘಟನೆ ನಡೆದಿದೆ. ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯೇ ದೃಢಪಡಿಸಿದೆ.

ಕೆಲವು ವರ್ಷದಿಂದ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ನಾಗರಾಜ್‌ ಅವರು ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದರು. ಕೆಲವು ದಿನಗಳಿಂದ ಚಳಿ, ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸಾಗರದಲ್ಲಿ ಚಿಕಿತ್ಸೆ ಪಡೆದು ಜ್ವರ ಕಡಿಮೆ ಆಗದೇ ಇದ್ದುದರಿಂದ ಆನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಎರಡು ದಿನದಿಂದ ಜ್ವರದ ಪ್ರಮಾಣ ಏರಿಕೆಯಾಗಿ ಕೋಮಾಕ್ಕೂ ಹೋಗಿದ್ದರು. ಚೇತರಿಸಿಕೊಳ್ಳುವ ಹಂತದಲ್ಲಿದ್ದಾಗ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.

ನಮ್ಮ ಇಲಾಖೆಯ ಸಿಬ್ಬಂದಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಆನಂತರ ತಪಾಸಣೆ ನಡೆಸಿದಾಗ ಡೆಂಗ್ಯೂ ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಮಧುಮೇಹ ಕೂಡ ಇತ್ತು. ಅಲ್ಲದೇ ಪ್ಲೇಟ್‌ ಲೆಟ್‌ ಪ್ರಮಾಣ ತೀವ್ರವಾಗಿ ಕುಸಿತ ಕಂಡಿತ್ತು. 26,000 ಕ್ಕೆ ಕುಸಿದಿದ್ದ ಪ್ಲೇಟ್‌ ಲೆಟ್ಸ್‌ ಸಂಖ್ಯೆ ಹೆಚ್ಚಿಸುವ ಪ್ರಯತ್ನ ನಡೆದಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ನಾಗರಾಜ್‌ ಮೃತಪಟ್ಟಿದ್ದಾರೆ ಎಂದು ಸಾಗರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಪ್ಪ ಖಚಿತಪಡಿಸಿದ್ದಾರೆ.

ಮೃತ ನಾಗರಾಜ್‌ ಅವರ ದೇಹವನ್ನು ಈಗಾಗಲೇ ಸಾಗರ ತಾಲೂಕಿನ ತಾಳಗುಪ್ಪ ಕುಟುಂಬದವರಿಗೆ ನೀಡಲಾಗಿದೆ.ಈ ಬಾರಿ ಮಳೆಗಾಲ ಶುರುವಾದ ನಂತರ ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಾಗರ ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಡೆಂಗ್ಯೂ ಜಾಗೃತಿಯನ್ನು ಮೂಡಿಸುವ ಕೆಲಸವೂ ಶುರುವಾಗಿದೆ.

RELATED ARTICLES
- Advertisment -
Google search engine

Most Popular

Recent Comments