ಬೆಂಗಳೂರು: ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 50 kmph ವೇಗದಲ್ಲಿ ಗುಡುಗು ಸಹಿತ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ ಮಾತ್ರವಲ್ಲದೆ ಶುಕ್ರವಾರಕ್ಕೂ ಮಳೆ ಮುಂದುವರೆಯಲಿದೆ. ಸುಮಾರು 30 ತಾಸಿನ ಭಾರೀ ಮಳೆಗೆ ತಯಾರಾಗಲು ಈ ಜಿಲ್ಲೆಗಳ ಜನರಿಗೆ ಸೂಚಿಸಲಾಗಿದೆ.
ನಾಳೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹೊರಡಿಸಲಾಗಿದ್ದು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಹಾಸನ ಜಿಲ್ಲೆಗಳಿಗೆ ಎಲ್ಲೋ ಅಲೆರ್ಟ್ ಹೊರಡಿಸಲಾಗಿದೆ.