ಮಂಗಳೂರು: ಭಾರಿ ಮಳೆಗೆ ಮಂಗಳೂರಿನ ಪಾಂಡೇಶ್ವರದಲ್ಲಿ ವಿದ್ಯುತ್ ತಂತಿ ತುಂಡಾಗಿ, ಅದರಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ.
ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು ದೇವರಾಜು (42) ಎಂದು ಗುರುತಿಸಲಾಗಿದೆ. ಇಬ್ಬರೂ ಕೂಡ ಇಲ್ಲಿನ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಒಬ್ಬ ಆಟೋ ಚಾಲಕ ಆಟೋ ಸ್ವಚ್ಚ ಗೊಳಿಸಲು ರೂಂ ನಿಂದ ಹೊರಬಂದು ಆಟೋ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ಬೀದಿ ದೀಪದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಪ್ರಜ್ಞೆ ತಪ್ಪಿ ಬಿದ್ದರು.
ಪುತ್ತೂರು ತಾಲೂಕಿನ ಬನ್ನೂರು ಜೈನರಗುರಿ ಎಂಬಲ್ಲಿ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಕುಸಿದಿದೆ. ಮನೆಯವರು ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ರಾತ್ರಿಯಿಡಿ ಭಾರೀ ಮಳೆ ಸುರಿದು ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಮಲೆನಾಡಿನ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭಾರೀ ಮಳೆ ಬಿದ್ದಿದೆ.