ಶಿವಮೊಗ್ಗ: ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಇಂದು (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ಆಯಾ ತಾಲೂಕಿನ ತಹಶೀಲ್ದಾರ್‌ಗಳು ರಜೆ ಘೋಷಣೆ ಮಾಡಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆ ಎಲ್ಲೆಡೆ ಮಳೆಯು ಈಗ ಬಿರುಸು ಪಡೆದಿದ್ದು, ಹೆಚ್ಚಿನ ಅನಾಹುತ ತಪ್ಪಿಸುವ ಸಲುವಾಗಿ ಈ ಮೂರು ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಕಾಲೇಜು ಹಾಗೂ ಅಂಗನವಾಡಿಗಳಿಗೆ ತಹಶೀಲ್ದಾರ್ ಗಳು ರಜೆ ಘೋಷಿಸಿದ್ದಾರೆ.