ಶಿವಮೊಗ್ಗ : ರೈತರು ಬೆಳೆದಿರುವಂತಹ ಭತ್ತ ಹಾಗೂ ಮೆಕ್ಕೆಜೋಳಕ್ಕೆ ಬೆಂಬಲಬೆಲೆಯನ್ನು ಘೋಷಿಸಬೇಕು ಹಾಗೂ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಒತ್ತಾಯಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭತ್ತ ಹಾಗೂ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದೆ. ೭೮ ಸಾವಿರ ಹೆಕ್ಟೇರ್ ನಲ್ಲಿ ಭತ್ತ, ೭೨ ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕಜೋಳ ಬೆಳೆಯನ್ನು ಜಿಲ್ಲೆಯ ರೈತರು ಬೆಳೆದಿದ್ದಾರೆ. ಈ ಬೆಳೆಯನ್ನು ಖರೀದಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ಘೋಷಿ ಸಬೇಕು ಹಾಗೂ ಪ್ರತೀ ತಾಲೂಕಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯ ಬೇಕೆಂದು ಆಗ್ರಹಿಸಿದರು.
ಇತ್ತೀಚಿನ ದಿನಗಳಲ್ಲಿ ಎಲ್ಲಾ ಬೆಲೆಗಳು ಗಗನಕ್ಕೇರಿವೆ. ರಸಗೊಬ್ಬರ, ಕೀಟನಾಶಕಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. ರೈತ ಕುಟುಂಬಗಳ ಜೀವನ ವೆಚ್ಚವೂ ಸಹ ಹೆಚ್ಚಾಗಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾತ್ರ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಇದರಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ಅರ್ಧ ಬೆಲೆಗೆ ಮಾರಾಟ ಮಾಡುವಂತಾಗಿದೆ ಎಂದರು.
ಪ್ರಸ್ತುತ ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡುವ ಅಗತ್ಯವಿದೆ. ಆದ್ದರಿಂದ ಕೂಡಲೇ ಖರೀದಿ ಕೇಂದ್ರ ಗಳನ್ನು ತೆರೆಯಬೇಕೆಂದ ಅವರು, ಖರೀದಿ ಕೇಂದ್ರಗಳು ಇಲ್ಲದೇ ಇರುವುದರಿಂದ ರೈತರು ತಮ್ಮಮನೆ ಬಾಗಿಲಿನಲ್ಲಿಯೇ ಬೆಳೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದ ರಿಂದಾಗಿ ರೈತರ ಬೆಳೆ ಮಧ್ಯವರ್ತಿ ಗಳು ಖರೀದಿಸುವಂತಾಗಿದೆ. ಸರ್ಕಾರ ನೀಡುವ ಬೆಂಬಲ ಬೆಲೆಯ ಲಾಭ ವನ್ನು ಮಧ್ಯವರ್ತಿಗಳು ಪಡೆಯು ವಂತಾಗಿದೆ ಎಂದರು.
ಕೂಡಲೇ ರಾಜ್ಯ ಸರ್ಕಾರ ಮೆಕ್ಕೆಜೋಳಕ್ಕೆ ೨೦೦೦ ರೂ. ಭತ್ತಕ್ಕೆ ೨೫೦೦ ರೂ. ಬೆಂಬಲ ಬೆಲೆ ಘೋಷಿ ಸಬೇಕು ಎಂದ ಅವರು, ಜಿಲ್ಲೆಯಲ್ಲಿ ಭತ್ತದ ಬೆಳೆಗೆ ಸೈನಿಕ ಹುಳುವಿನ ಬಾಧೆ ಕಂಡು ಬಂದಿದ್ದು, ಇದರಿಂದಾಗಿ ಅರ್ಧಕ್ಕಿಂತ ಹೆಚ್ಚಾಗಿ ಭತ್ತದ ಬೆಳೆ ನಾಶವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಎಕರೆಗೆ ೨೫ ಸಾವಿರ ರೂ. ಪರಿಹಾರ ಕೊಡಬೇಕು. ಇದು ವ ರೆಗೂ ಬರಪರಿಹಾರದ ಹಣ ತಲು ಪದೇ ಇರುವ ರೈತರಿಗೆ ಬರಪರಿ ಹಾರ ವನ್ನು ಆಯಾ ರೈತರ ಖಾತೆಗೆ ಜಮಾ ಮಾಡಬೇಕೆಂದು ಒತ್ತಾಯಿ ಸಿದರು.
ಸುದ್ದಿಗೋಷ್ಠಿಯಲ್ಲಿ ಕಡಿದಾಳ್ ಶಾಮಣ್ಣ, ಪಂಚಾಕ್ಷರಿ, ಪಿ.ಡಿ. ಮಂಜಪ್ಪ, ಎಫ್.ಬಿ.ಜಗದೀಶ್ ಮೊದಲಾದವರಿದ್ದರು.