Sunday, September 8, 2024
Google search engine
Homeಇ-ಪತ್ರಿಕೆಮೇ.31ಕ್ಕೆ ಬೆಳಿಗ್ಗೆ ಎಸ್ ಐಟಿ ಮುಂದೆ ನಾನೇ ಹಾಜರಾಗುವೆ: ಪ್ರಜ್ವಲ್‌ ರೇವಣ್ಣ ವಿಡಿಯೋ ಹೇಳಿಕೆ ಬಿಡುಗಡೆ

ಮೇ.31ಕ್ಕೆ ಬೆಳಿಗ್ಗೆ ಎಸ್ ಐಟಿ ಮುಂದೆ ನಾನೇ ಹಾಜರಾಗುವೆ: ಪ್ರಜ್ವಲ್‌ ರೇವಣ್ಣ ವಿಡಿಯೋ ಹೇಳಿಕೆ ಬಿಡುಗಡೆ

ಬೆಂಗಳೂರು :  ಹಲವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಸದ್ಯಕ್ಕೆ ಅವರೀಗ ಎಲ್ಲಿದ್ದಾರೆನ್ನುವ ಬಗ್ಗೆ ಮಾಹಿತಿ ನೀಡಿಲ್ಲವಾದರೂ, ಮೇ೩೧ ರಂದು ಬೆಳಗ್ಗೆ ೧೦ -೩೦ಕ್ಕೆ ತಾವೇ ಎಸ್‌ ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆ ನೀಡಿದ್ದಾರೆ.
ನಾಪತ್ತೆಯಾದ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಪ್ರಜ್ವಲ್,  ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದಿದ್ದಾರೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ.
ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು,ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು.ಅದರಂತೆ ಬಂದಿದ್ದೇನೆ ಅಂತಲೂ ಸಮರ್ಥಿಸಿಕೊಂಡಿದ್ದಾರೆ.
ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

ನಾನು ಇದೇ ಮೇ.31ರಂದು ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments