Monday, July 22, 2024
Google search engine
Homeಇ-ಪತ್ರಿಕೆಅಡಿಕೆ ತೋಟದಲ್ಲಿ ಅಕ್ರಮ ಗಾಂಜಾ ಬೆಳೆ:  ಪೊಲೀಸರಿಂದ ದಾಳಿ        

ಅಡಿಕೆ ತೋಟದಲ್ಲಿ ಅಕ್ರಮ ಗಾಂಜಾ ಬೆಳೆ:  ಪೊಲೀಸರಿಂದ ದಾಳಿ        

ಶಿವಮೊಗ್ಗ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದ ರೈತನ ತೋಟಕ್ಕೆ ಪೊಲೀಸರು ದಾಳಿ ಮಾಡಿ, ಗಿಡಗಳನ್ನು ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿಯು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆದಿರುವುದನ್ನು ಖಚಿತಪಡಿಸಿಕೊಂಡ ನಂತರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಿಥುನ್ ಕುಮಾರ್ ಜಿ.ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮಾರೆಡ್ಡಿ, ಕಾರಿಯಪ್ಪ ಎ.ಜಿ, ಮಾರ್ಗದರ್ಶನದಲ್ಲಿ ಈ  ದಾಳಿಯನ್ನು ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತರರವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ, ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000 ರೂ.ಗಳ 9 ಕೆಜಿ 524 ಗ್ರಾಂ ತೂಕದ  ಒಟ್ಟು 14 ಹಸಿ ಗಾಂಜಾ ಗಿಡಗಳನ್ನು   ವಶಪಡಿಸಿಕೊಂಡಿದೆ ಎಂದು ಮೂಲಗಳು  ತಿಳಿಸಿವೆ.

ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆಃ 0148/2024  ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ ಎಂದು ಹೇಳಿವೆ.

RELATED ARTICLES
- Advertisment -
Google search engine

Most Popular

Recent Comments